ಹೊಸ ದಿಗಂತ ಆನ್ಲೈನ್ ಡೆಸ್ಕ್:
ಹವಾಮಾನದಲ್ಲಿ ಮತ್ತೆ ಬದಲಾವಣೆಯಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಜೊತೆಗೆ ಚಳಿ ಹೆಚ್ಚಲಿದೆ. ಸಮುದ್ರದಲ್ಲಿನ ಲಾನಿನಾ ಏರಿಳಿತದಿಂದ ಚಳಿ ಇನ್ನಷ್ಟು ತೀವ್ರತೆ ಪಡೆದುಕೊಳ್ಳವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಮಾಹಿತಿ ನೀಡಿದೆ.