spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಹಸಿರು ಜಿಲ್ಲೆಯಾಗಿದ್ದ ಚಾಮರಾಜನಗರದಲ್ಲಿ ಎರಡು ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆ

- Advertisement -Nitte

ಚಾಮರಾಜನಗರ: ಕೊರೊನಾ ಮುಕ್ತ ಹಸಿರು ಜಿಲ್ಲೆಯಾಗಿದ್ದ ಚಾಮರಾಜನಗರದಲ್ಲಿ ಈಗ ಎರಡು ಕೊರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಅನ್ ಲಾಕ್ ಬಳಿಕ ಕೊರೊನಾ ವೈರಸ್ ಗೆ ತಲ್ಲಣಿಸುತ್ತಿರುವ ಗಡಿ ಜಿಲ್ಲೆ ಚಾಮರಾಜನಗರವು ಹಸಿರು ವಲಯದಿಂದ ಕೆಂಪು ವಲಯದತ್ತ ಸಾಗುತ್ತಿದೆ. ಚಾಮರಾಜನಗರದಲ್ಲಿ ಎರಡು ಸೋಂಕು ಪ್ರಕರಣಗಳನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ದೃಢಪಡಿಸಿದ್ದಾರೆ.
ಸೋಮವಾರ ಸಂಜೆ ಸರ್ವೆ ಇಲಾಖೆಯ 33 ವರ್ಷದ ಮಹಿಳಾ ನೌಕರಳಲ್ಲಿ ಕೊರೋನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚಾಮರಾಜನಗರ ತಾಲ್ಲೂಕು ಕಚೇರಿಯನ್ನು ಸ್ಯಾನಿಟೈಜ್ ಮಾಡಿ, ಸಾರ್ವಜನಿಕರು ಮತ್ತು ಕಚೇರಿ ಸಿಬ್ಬಂದಿಗಳಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅದೇ ರೀತಿ ಸರ್ವೆ ಇಲಾಖೆ ಸಿಬ್ಬಂದಿ ವಾಸವಿದ್ದ ತಾಲ್ಲೂಕು ಕಚೇರಿ ಹಿಂಭಾಗದ ಭಗೀರಥ ನಗರವನ್ನು ಸೀಲ್ ಡೌನ್ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಮೂಲದ ಸರ್ವೆ ಇಲಾಖೆ ಮಹಿಳಾ ಸಿಬ್ಬಂದಿ ಕೆಲವು ದಿನಗಳ ಹಿಂದೆಯಷ್ಟೇ ತವರಿಗೆ ಹೋಗಿ ಬಂದಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss