Saturday, June 25, 2022

Latest Posts

ಹಾರಂಗಿ, ಉದ್ಯಾನವನ ಭೇಟಿಗೆ ಮುಕ್ತ: ಕೊಡಗು ಪ್ರವಾಸಿಗರು ಫುಲ್ ಖುಷ್!!

ಹೊಸ ದಿಗಂತ ಆನ್‌ಲೈನ್ ಡೆಸ್ಕ್:

ಕರ್ನಾಟಕದ ಕಾಶ್ಮೀರ ಕೊಡಗು ಜಿಲ್ಲೆ ಮತ್ತೆ ಪ್ರವಾಸಿಗರನ್ನು ತನ್ನತ್ತ ಸೆಳೆಯಲು ಸಿದ್ಧತೆ ಮಾಡಿಕೊಂಡಿದೆ.
ಕೋವಿಡ್ ಅನ್‌ಲಾಕ್ 5.0 ಬಳಿಕ ಮುಚ್ಚಿದ್ದ ಜಿಲ್ಲೆಯ ಪ್ರವಾಸಿ ತಾಣ ಹಾರಂಗಿ, ಸೋಮವಾರದಿಂದ ಪ್ರವಾಸಿಗರಿಗೆ ಮುಕ್ತವಾಗಿದೆ.
ಆದರೆ ಈ ಬಗ್ಗೆ ಎಚ್ಚರಿಕೆ ನೀಡಿರುವ ಕಾವೇರಿ ನೀರಾವರಿ ನಿಗಮ, ಕೋವಿಡ್ 19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಮೂಲಕ ಮಾತ್ರ ಇಲ್ಲಿಗೆ ಭೇಟಿ ನೀಡಬಹುದು ಎಂದು ಹೇಳಿದೆ.
ಕೊರೋನಾ ಹಾವಳಿಯಿಂದ ಕಂಗೆಟ್ಟಿದ್ದ ಕೊಡಗಿನಲ್ಲಿ ಸೆಪ್ಟೆಂಬರ್ ತಿಂಗಳ ಬಳಿಕ ಕೆಲವೊಂದು ಪ್ರವಾಸಿ ತಾಣಗಳಿಗೆ ತೆರಳಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಹಾರಂಗಿ ಉದ್ಯಾನ, ಸಂಗೀತ ಕಾರಂಜಿಗೆ ಭೇಟಿ ನೀಡಲು ನಿಷೇಧ ಮುಂದುವರಿಸಲಾಗಿತ್ತು. ಇದೀಗ ಸ್ಥಳೀಯರ ಒತ್ತಾಯದ ಮೇರೆಗೆ ಪ್ರವೇಶ ಧನ ನಿಗದಿಪಡಿಸಿ ಭೇಟಿಗೆ ಅವಕಾಶ ಕಲ್ಪಿಸಿದೆ.
ಸರ್ಕಾರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತಿದೆ. ಆದರೆ ಇಲಾಖೆ ಅಧಿಕಾರಿಗಳು ಪ್ರೋತ್ಸಾಹಿಸುತ್ತಿಲ್ಲ. ಪ್ರವಾಸಿ ತಾಣಗಳಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡಿರುವ ನಾವು ಇವುಗಳನ್ನು ಮುಚ್ಚಿದ್ದರಿಂದಾಗಿ ವ್ಯಾಪಾರವಿಲ್ಲದೆ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದೇವೆ ಎಂದು ಇತ್ತೀಚೆಗಷ್ಟೇ ವ್ಯಾಪಾರಸ್ಥರು ಅಳಲು ತೋಡಿಕೊಂಡಿದ್ದರು. ಈಗ ಅವರೆಲ್ಲರಿಗೂ ನಿಗಮ ‘ದೀಪಾವಳಿ ಗಿಫ್ಟ್’ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss