Saturday, July 2, 2022

Latest Posts

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಹೈದರಾಬಾದ್ ಗೆ 34 ರನ್ ಗಳ ಸೋಲು

ಶಾರ್ಜಾ: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್-13ರಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ 34 ರನ್‌ಗಳಿಂದ ಗೆಲುವು ದಾಖಲಿಸಿದೆ.
ಟಾಸ್ ಗೆದ್ದ ಮುಂಬೈ ತಂಡ ನಿರೀಕ್ಷೆಯಂತೆಯೇ ಬ್ಯಾಟಿಂಗ್ ಆಯ್ದುಕೊಂಡು 5 ವಿಕೆಟ್‌ಗೆ 208 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ 60 ರನ್ ತಂಡಕ್ಕೆ ಗೆಲುವಿನ ನಿರೀಕ್ಷೆ ನೀಡಿದರೂ , ಮುಂಬೈ ಇಂಡಿಯನ್ಸ್ ತಂಡದ ಸಂಘಟಿತ ಬೌಲಿಂಗ್ ನಿರ್ವಹಣೆಯ ಹೈದರಾಬಾದ್ ಬ್ಯಾಟ್ಸಮನ್ ಗಳಿಗೆ ಆಘಾತ ನೀಡಿತು.
ಅರಂಭದಲ್ಲಿ ಉತ್ತಮ ಲಯ ಕಂಡ ಸನ್‌ರೈಸರ್ಸ್‌ ತಂಡ ಕೊನೇ 5 ಓವರ್‌ಗಳಲ್ಲಿ ಮುಂಬೈ ಬೌಲರ್‌ಗಳ ದಾಳಿಗೆ ವಿಕೆಟ್ ಕಳೆದುಕೊಳ್ಳುತ್ತಾ ಹೋಯಿತು. ಇದರಿಂದಾಗಿ ಸನ್‌ರೈಸರ್ಸ್‌ ತಂಡ 7 ವಿಕೆಟ್‌ಗೆ 174 ರನ್ ಗಳಿಸಲಷ್ಟೇ ಶಕ್ತವಾಯಿತು.
ಮುಂಬೈ ಪರ ವೇಗಿಗಳಾದ ಟ್ರೆಂಟ್ ಬೌಲ್ಟ್, ಜೇಮ್ಸ್ ಪ್ಯಾಟಿನ್‌ಸನ್ ಮತ್ತು ಜಸ್‌ಪ್ರೀತ್ ಬುಮ್ರಾ ತಲಾ 2 ವಿಕೆಟ್ ಕಬಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss