Thursday, August 11, 2022

Latest Posts

ಹಾವೇರಿ| ಕೊರೋನಾ ಇಳಿಮುಖವಾದ ಬಳಿಕ ವೈದ್ಯಕೀಯ ವಿಜ್ಞಾನ ಕಾಲೇಜಿನ ಶಂಕುಸ್ಥಾಪನೆ: ಗೃಹ ಸಚಿವ

ಹಾವೇರಿ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾದ ಮೇಲೆ ಮುಖ್ಯಮಂತ್ರಿಗಳಿಂದ ಉದ್ದೇಶಿತ ಹಾವೇರಿ ವೈದ್ಯಕೀಯ ವಿಜ್ಞಾನ ಕಾಲೇಜಿನ ಶಂಕುಸ್ಥಾಪನೆ ಕಾರ್ಯ ನೆರವೇರಿಸಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸೋಮವಾರ ಜಿಲ್ಲಾ ಆಸ್ಪತ್ರೆಯಲ್ಲಿ ನೂತನ ವೈರಾಣು ಸಂಶೋಧನೆ ಮತ್ತು ರೋಗ ನಿರ್ಣಯ ಪ್ರಯೋಗಾಲಯ (ವಿ.ಆರ್.ಡಿ.ಎಲ್.) ಹಾಗೂ ಐ.ಸಿ.ಯು ವಾರ್ಡ್‌ನ್ನು ಉದ್ಘಾಟಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಇಗಾಗಲೇ ವೈದ್ಯಕೀಯ ಕಾಲೇಜ್ ಪ್ರಾರಂಭಕ್ಕೆ ಅಗತ್ಯ ಅನುದಾನ ಬಿಡುಗಡೆಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿಶೇಷ ಅಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಕಠಿಣ ಕ್ರಮ
ಇತ್ತೀಚೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಕೋವಿಡ್ ವಾರಿಯರ‍್ಸಗಳ ಮೇಲೆ ರೈತ ಸಂಘದ ಮಹಿಳಾ ಘಟಕದ ಮುಖಂಡೆಯೋರ್ವರು ಹಲ್ಲೆ ಮಾಡಿದುದರ ಕುರಿತು ಗಮನಸೆಳೆದಾಗ ಪ್ರತಿಕ್ರೀತಿಸಿದ ಸಚಿವರು.
ಕೋವಿಡ್ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರು ಸೇರಿದಂತೆ ಯಾರ ಮೇಲಾದರೂ ಹಲ್ಲೆ ಸೇರಿದಂತೆ ದೌರ್ಜನ್ಯ ವ್ಯಸಗಿದರೆ ಅವರ ಮೇಲೆ ಕಾನೂನು ರೀತ್ಯ ಕೋವಿಡ್ ಆಕ್ಟ್‌ನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದ ಶಿವಕುಮಾರ ಉದಾಸಿ, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಅಪರ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ., ಡಿಹೆಚ್‌ಓ ಡಾ. ರಾಜೇಂದ್ರ ದೊಡ್ಮನಿ, ಪ್ರಭಾರ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಪಿ.ಎಸ್.ಹಾವನೂರ, ಡಾ. ಸುರೇಶ ಪೂಜಾರ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss