spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಹಾವೇರಿ| ಬಂಕಾಪುರ ಪ್ರಾ.ಆ.ಕೇಂದ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಕಾಟ್, ಬೆಡ್, ಬೆಡ್ ಶೀಟ್‌ಗಳ ವಿತರಣೆ

- Advertisement -Nitte

ಹಾವೇರಿ:   ಜಿಲ್ಲೆಯ ಶಿಗ್ಗಾಂವ್ ತಾಲ್ಲೂಕಿನ ಬಂಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೋವಿಡ್-೧೯ ಸೊಂಕಿತರ ಚಿಕಿತ್ಸೆಗೆ ಬುಧವಾರ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ವತಿಯಿಂದ ಕಾಟ್, ಬೆಡ್, ಬೆಡ್ ಶೀಟ್‌ಗಳನ್ನು ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ನೀಡಿದ ೨ ಲಕ್ಷ ಮೌಲ್ಯದ ೩೦ ಕಾಟ್, ಬೆಡ್, ಬೆಡ್ ಶೀಟ್‌ಗಳನ್ನು ಹಾವೇರಿ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣರವರಿಗೆ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡರವರು ಹಸ್ತಾಂತರಿಸಿದರು.
ಜನಮಂಗಲ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ಪರಿಕರಗಳನ್ನು ವಿಶೇಷ ಚೇತನರಿಗೆ ಜಿಲ್ಲಾಧಿಕಾರಿಗಳಿಂದ ವಿತರಿಸಲಾಯಿತು.  ಅಪರ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ, ಆಡಳಿತ ವೈದ್ಯಾಧಿಕಾರಿ ಡಾ. ಮನೋಜ ನಾಯ್ಕ, ಸಂಸ್ಥೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಜನಜಾಗೃತಿ ಅಧ್ಯಕ್ಷರಾದ ಮುತ್ತಣ್ಣ ಎಲಿಗಾರ, ಪ್ರಕಾಶ ಶೆಟ್ಟಿ, ಮೋಹನ ಮೆಣಸಿನಕಾಯಿ, ಪುರಸಭೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇಣುಕಾ ದೇಸಾಯಿ ಹಾಗೂ ಯೋಜನಾಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss