Thursday, July 7, 2022

Latest Posts

ಹಾವೇರಿ| ರಾಣೇಬೆನ್ನೂರು ಸಂಪೂರ್ಣ ಬಂದ್ ಕುರಿತು ಆದೇಶ ಹೊರಡಿಸಿಲ್ಲ: ಜಿಲ್ಲಾಧಿಕಾರಿ

ಹಾವೇರಿ: ಜಿಲ್ಲೆ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರ ವ್ಯಪ್ತಿಯಲ್ಲಿ ಜು. ೧೪ ರಿಂದ ೨೦ರವರೆಗೆ ಅವಶ್ಯಕ ಸೇವೆಗಳು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜಿಲ್ಲಾಡಳಿತದಿಂದ ಈ ರೀತಿಯ ಯಾವುದೇ ಆದೇಶ ಹೊರಡಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ತಿಳಿಸಿದ್ದಾರೆ.
ಕೋವಿಡ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜೂನ್ ೩೦ ರಂದು ಹೊರಡಿಸಿರುವ ಅದೇಶದಂತೆ ಜುಲೈ ೩೧ ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಉಳಿದಂತೆ ರಾಣೇಬೆನ್ನೂರಿನಲ್ಲಿ ಸಂಪೂರ್ಣ ಬಂದ್ ಮಾಡುವ ಆದೇಶವನ್ನು ಜಿಲ್ಲಾಡಳಿತ ಹೊರಡಿಸಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss