Wednesday, August 10, 2022

Latest Posts

ಹಾಸನ| ಕಾಡಾನೆ ಹಾವಳಿ: 30 ಎಕರೆಗೂ ಹೆಚ್ಚು ಭತ್ತದ ಬೆಳೆ ನಾಶ

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು,ಅನ್ನದಾತರು ಹೈರಾಣಾಗುವಂತಾಗಿದೆ.

ಒಂದೆಡೆ ಅತಿವೃಷ್ಟಿ ಮತ್ತೊಂದೆಡೆ ಕಾಡಾನೆ ಹಾವಳಿಯಿಂದ ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳುವುದೇ ರೈತರಿಗೆ ದೊಡ್ಡ ಸವಾಲಾಗಿದೆ.
ಸಕಲೇಶಪುರ ತಾಲ್ಲೂಕಿನ ಮಳಲಿ ಗ್ರಾಮದಲ್ಲಿ 30 ಎಕರೆಗೂ ಹೆಚ್ಚು ಭತ್ತದ ಬೆಳೆ ಆನೆ ದಾಳಿಗೆ ನಾಶವಾಗಿದ್ದು,ಆನೆ ದಾಳಿಗೆ ಬೆಳೆ ಧ್ವಂಸವಾಗಿದೆ.

ಕಾಡಾನೆಗಳ ಹಾವಳಿಯಿಂದ ಗ್ರಾಮದ ಶಾಂತಕುಮಾರ್, ಮಂಜು,ಮಧು, ವಿಜಯ್ ಕುಮಾರ್ ಸೇರಿ ಹಲವರ ಬೆಳೆ ನಾಶವಾಗಿದ್ದು,ಕಾಡಾನೆ ಹಾವಳಿ ತಡೆಯದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಸೂಕ್ತ ಬೆಳೆ ಪಾರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss