Sunday, August 14, 2022

Latest Posts

ಹಾಸನ| ಕ್ಷುಲ್ಲಕ ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಕ್ಷಲ್ಲುಕ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಓರ್ವನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ನಡೆದಿದೆ.
ಪಟ್ಟಣದ ಬಾಗೂರು ರಸ್ತೆಯ ನಿವಾಸಿ ಸಮೀವುಲ್ಲಾ (25) ಕೊಲೆಯಾದ ದುರ್ದೈವಿ. ಪರಿವಾಳದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆಯುತ್ತಿದ್ದ ವೇಳೆ ಸಮೀವುಲ್ಲಾ ಇಬ್ಬರು ಸಮಾಧಾನ ಮಾಡಲು ಮುಂದಾದ ವೇಳೆ ಸ್ಥಳಕ್ಕಾಗಮಿಸಿದ ಮತ್ತೊಬ್ಬ ಚಾಕುವಿನಿಂದ ದಾಳಿ ನಡೆದಿದ್ದಾನೆ. ಈ ವೇಳೆ ತೀವ್ರ ರಕ್ತಸ್ರಾವವಾಗಿ ಸಮೀವುಲ್ಲಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆಯಿಂದ ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಇದ್ದು, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಗಲಾಟೆ ಸಂಬಂಧ ನಾಲ್ವರನ್ನು ಈಗಾಗಲೇ ಬಂಧಿಸಿದ್ದು ತನಿಖೆ ಮುಂದುವರೆಸಿದ್ದಾರೆ.
ಈ ಸಂಬಂಧ ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss