Saturday, August 13, 2022

Latest Posts

ಹಾಸನ ಜಿಲ್ಲೆಯಲ್ಲಿಂದು 372 ಮಂದಿಗೆ ಕೊರೋನಾ ಪಾಸಿಟಿವ್, 4 ಮಂದಿ ಬಲಿ   

ಹಾಸನ: ಜಿಲ್ಲೆಯಲ್ಲಿಂದು ಕೊರೋನಾ ಸೋಂಕಿನಿಂದ 4 ಮಂದಿ ಮೃತರಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 335ಕ್ಕೆ ಏರಿಕೆಯಾಗಿದೆ. ಹೊಸದಾಗಿ 372 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 17,161ಕ್ಕೆ ಏರಿಕೆಯಾಗಿದೆ.
ಜಿಲ್ಲಾಸ್ಪತ್ರೆಯಲ್ಲಿ 3,466 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 13,360 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 44 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಪತ್ತೆಯಾದ 372 ಕೊರೋನಾ ಸೋಂಕು ಪ್ರಕರಣಗಳಲ್ಲಿ 30 ಮಂದಿ ಅರಸೀಕೆರೆ ತಾಲ್ಲೂಕಿನವರಾಗಿದ್ದು, 72 ಮಂದಿ ಚನ್ನರಾಯಪಟ್ಟಣ ತಾಲ್ಲೂಕಿನವರು, ಆಲೂರು ತಾಲ್ಲೂಕಿನಲ್ಲಿ ಒಬ್ಬರು, 152 ಮಂದಿ ಹಾಸನ ತಾಲ್ಲೂಕು, 48 ಜನ ಹೊಳೆನರಸೀಪುರ ತಾಲ್ಲೂಕು, 28 ಮಂದಿ ಅರಕಲಗೂಡು ತಾಲ್ಲೂಕು, ಬೇಲೂರು ತಾಲ್ಲೂಕಿನ 26 ಜನ, ಸಕಲೇಶಪುರ ತಾಲ್ಲೂಕಿನಲ್ಲಿ 14 ಮಂದಿಗೆ ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss