ಹಾಸನ: ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಕೊರೋನಾ ಸೋಂಕಿತರ ಸಂಖ್ಯೆ 2000 ಗಡಿ ದಾಟಿದೆ.
ಒಟ್ಟು ಸೋಂಕಿತರ ಸಂಖ್ಯೆ 2030ಕ್ಕೆ ಏರಿಕೆಯಾಗಿದ್ದು, 1069 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ. 901 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 23 ಮಂದಿಗೆ ಕೋವಿಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗುರುವಾರ ಸೋಂಕು ಕಾಣಿಸಿಕೊಂಡ 97 ಪ್ರಕರಣಗಳಲ್ಲಿ 14 ಜನ ಅರಸೀಕೆರೆ, 17 ಮಂದಿ ಚನ್ನರಾಯಪಟ್ಟಣ, 32 ಜನ ಹಾಸನ, 14 ಜನ ಹೊಳೆನರಸೀಪುರ, ಆಲೂರು 1, ಅರಕಲಗೂಡು 7, ಬೇಲೂರಿನ 11 ಹಾಗೂ ಹೊರಜಿಲ್ಲೆಯ ಓರ್ವರಲ್ಲಿ ಸೋಂಕು ಕಾಣಿಸಿಕೊಂಡಿದೆ.6 ಮಂದಿ ಸಾವು
ಜಿಲ್ಲೆಯಲ್ಲಿ ಗುರುವಾರವೂ ಕೋವಿಡ್ ಗೆ ಆರು ಮಂದಿ ಬಲಿಯಾಗಿದ್ದು, ಈ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ.
ಗುರುವಾರ ಸಾವನ್ನಪ್ಪಿದವರಲ್ಲಿ 55 ವರ್ಷದ ಮಹಿಳೆ, 60 ವರ್ಷದ ಪುರುಷ, 26 ವರ್ಷದ ಮಹಿಳೆ, 68 ವರ್ಷದ ಪುರುಷ, 52 ವರ್ಷದ ಪುರುಷ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 50 ವರ್ಷದ ಪುರುಷ ಸೇರಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.