ಹಾಸನ: ಜಿಲ್ಲೆಯಲ್ಲಿ ಒಂದೇ ದಿನ 7 ಕೊರೋನಾ ಪ್ರಕರಣ ವರದಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 16ಕ್ಕೇರಿದೆ.
ಶುಕ್ರವಾರ ಮಧ್ಯಾಹ್ನದ ವೇಳೆಗೆ ಬಿಡುಗಡೆಯಾದ ಬುಲೆಟಿನ್ ನಲ್ಲಿ ಸೋಂಕಿತರ ಸಂಖ್ಯೆ ಮೂರಷ್ಟೆ ಇತ್ತು.
ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಮಧ್ಯಾಹ್ನದ ನಂತರ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಹೊಸ ನಾಲ್ಕು ಪ್ರಕರಣಗಳ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಶುಕ್ರವಾರ ಚನ್ನರಾಯಪಟ್ಟಣ ಮೂಲದ ಮೂವರು,ಅರಕಲಗೂಡು,ಹೊಳೆನರಸೀಪುರದ ತಲಾ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದ್ದು,ಸೋಂಕಿತರೆಲ್ರರು ಮುಂಬೈನಿಂದ ಜಿಲ್ಲೆಗೆ ಬಂದವರಾಗಿದ್ದಾರೆ.