Monday, July 4, 2022

Latest Posts

ಹಾಸನ ಜಿಲ್ಲೆಯಲ್ಲಿ ಕೋವಿಡ್ ಗೆ ಮತ್ತೊಂದು ಬಲಿ, 21 ಮಂದಿಗೆ ಸೋಂಕು

ಹಾಸನ: ಜಿಲ್ಲೆಯಲ್ಲಿ ಕೋವಿಡ್ 19 ಸಾವಿನ ಸರಣಿ ಮುಂದುವರೆದಿದ್ದು, ಶುಕ್ರವಾರ ಕೋವಿಡ್ಗೆ ಮತ್ತೊಂದು ಬಲಿಯಾಗಿದೆ.
ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಬಾಧಿತರ ಸಾವಿನ ಸಂಖ್ಯೆ 26ಕ್ಕೆ ಏರಿಕೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಹಾಸನ ಮೂಲದ 50 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿಯು ಜು.6ರಂದು ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಿಗಿತ್ತು. ಜು.11ರಿಂದ ಆಸ್ಪತ್ರೆಯ ಐಸಿಯುವಿನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತಾದರೂ, ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಮುಂಜಾನೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಸರ್ಕಾರದ ನಿಯಾಮವಳಿಯಂತೆ ಕೋವಿಡ್ ಪೀಡಿತ ವ್ಯಕ್ತಿಯ ಅಂತ್ಯ ಸಂಸ್ಕಾರ ನೆರವೇರಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಶುಕ್ರವಾರ 21 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 792ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ 529 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 238 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸಿಯುವಿನಲ್ಲಿ ಒಟ್ಟು 13 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.
21 ಸೋಂಕಿತರ ಪೈಕಿ ಅರಕಲಗೂಡು 1. ಅರಸೀಕೆರೆಯ 5, ಬೇಲೂರು 1,ಚನ್ನರಾಯಪಟ್ಟಣ 3, ಹಾಸನ 9, ಹೊಳೆ ನರಸೀಪುರ 1 ಹಾಗೂ ಸಕಲೇಶಪುರದ ಒಬ್ಬರು ಸೇರಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss