ಹಾಸನ: ಜಿಲ್ಲೆಯಲ್ಲಿ ಭಾನುವಾರ ಮೂವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಇಂದು ಹೊಸದಾಗಿ 195 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 5970ಕ್ಕೆ ಏರಿಕೆಯಾಗಿದ್ದು,ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸಕ್ರಿಯವಾಗಿ 1865 ಮಂದಿ ಸೋಂಕಿತರು ಚಿಕಿತ್ಸೆ ನೀಡಲಾಗುತ್ತಿದೆ.
ಈವರೆಗೆ 3946 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು,ತೀವ್ರ ನಿಗಾ ಘಟಕದಲ್ಲಿ 59 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಪತ್ತೆಯಾದ 195 ಕೊರೋನ ಸೋಂಕು ಪ್ರಕರಣಗಳಲ್ಲಿ 17 ಜನ ಅರಸೀಕೆರೆ ತಾಲ್ಲೂಕಿನವರು, 15 ಜನ ಚನ್ನರಾಯಪಟ್ಟಣ, ಆಲೂರಿನ 4 ಮಂದಿ , ಹಾಸನ ತಾಲೂಕಿನ 88 , 21 ಜನ ಹೊಳೆನರಸೀಪುರ ತಾಲ್ಲೂಕು, 15 ಜನ ಅರಕಲಗೂಡು ತಾಲ್ಲೂಕು, ಬೇಲೂರು ತಾಲ್ಲೂಕಿನಲ್ಲಿ 26 ಜನ ಹಾಗೂ ಸಕಲೇಶಪುರ ತಾಲ್ಲೂಕಿನ 9 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈವರೆಗೆ ಒಟ್ಟು 159 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ.