Monday, August 8, 2022

Latest Posts

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ, ಒಳ ಹರಿವು ಹೆಚ್ಚಳದಿಂದ ತುಂಬಿದ ಜಲಾಶಯ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು,ಜಲಾಶಯಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಯಗಚಿ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿರುವುದರಿಂದ ಒಳ ಹರಿವು ಹೆಚ್ಚಾಗುತ್ತಿದ್ದು, ಪ್ರಸ್ತುತವಾಗಿ ಜಲಾಶಯವು ತುಂಬುವ ಹಂತದಲ್ಲಿದ್ದು ಯಾವುದೇ ಕ್ಷಣದಲ್ಲಿ ಜಲಾಶಯದಿಂದ ಹೊಳೆಗೆ ನೀರನ್ನು ಹೊರಬಿಡುವ ಸಂಭವವಿದ್ದು,ಅಣೆಕಟ್ಟೆಯ ಕೆಳಭಾಗದ ಹಾಗೂ ನದಿ ಪಾತ್ರದ ಪ್ರದೇಶದಲ್ಲಿ ಬರುವ ಎಲ್ಲಾ ಹಳ್ಳಿಗಳ ಸಾರ್ವಜನಿಕರು ಮತ್ತು ಜನ ಜಾನುವಾರು ಹಾಗೂ ಆಸ್ತಿ ಪಾಸ್ತಿ ವಗೈರೆಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಿಕೊಳ್ಳುವಂತೆ ಯಗಚಿ ಯೋಜನಾ ವಿಭಾಗ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.
ಆಲೂರು ತಾಲೂಕಿನ ವಾಟೆಹೊಳೆ ಜಲಾಶಯಕ್ಕು ನೀರು ಬರುತ್ತಿದ್ದು,ನದಿ ಪಾತ್ರದ ಜನರು ಎಚ್ಚರಿಕೆವಹಿಲು ಸೂಚನೆ
ಜಲಾಶಯವು ತುಂಬುವ ಹಂತದಲ್ಲಿದ್ದು,ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಿಕೊಳ್ಳುವಂತೆ ಆಲೂರು ವಾಟೆಹೊಳೆ ಯೋಜನಾ ವಿಭಾಗ ಸಹಾಯಕ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.
ಮತ್ತೊಂದೆಡೆ ಮೂಡಿಗೆರೆ ಹಾಗೂ ಸಕಲೇಶಪುರ ಭಾಗದಲ್ಲಿ ಉತ್ತಮ ಮಳೆ ಬೀಳುತ್ತಿರುವ ಹಿನ್ನಲೆ ಜಲಾಶಯಕ್ಕೆ ಒಳ ಬರುವ ನೀರಿನ ಪ್ರಮಾಣ ಹೆಚ್ಚಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss