Friday, July 1, 2022

Latest Posts

ಹಾಸನ ಜಿಲ್ಲೆಯಲ್ಲಿ ಸೋಮವಾರ 25 ಹೊಸ ಕೋವಿಡ್ ಪಾಸಿಟಿವ್, ಸೋಂಕಿತರ ಸಂಖ್ಯೆ 711ಕ್ಕೆ ಏರಿಕೆ

ಹಾಸನ: ಜಿಲ್ಲೆಯಲ್ಲಿ ಸೋಮವಾರ 25 ಹೊಸ ಕೋವಿಡ್ ಪಾಸಿಟಿವ್ ಪ್ರರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 711ಕ್ಕೆ ಏರಿಕೆಯಾಗಿದೆ.
ಕಳೆದ ಹದಿನೈದು ದಿನದಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುತ್ತಿದ್ದು, ಇಲ್ಲಿಯವರೆಗೂ 455 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 235 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಸೋಮವಾರ ಸೋಂಕು ದೃಢಪಟ್ಟವರ ಪೈಕಿ ಆಲೂರು.1,ಅರಸೀಕೆರೆ 4,ಚನ್ನರಾಯಪಟ್ಟಣ 4, ಹಾಸನ 12, ಹೊಳೆನರಸೀಪುರ 3, ಸಕಲೇಶಪುರ ಒಬ್ಬರು ಸೇರಿದ್ದು, ಕೋವಿಡ್ ಆಸ್ಪತ್ರೆಯ ಐಸಿಯುವಿನಲ್ಲಿ 12 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.
21ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ 
ಜಿಲ್ಲೆಯಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 21ಕ್ಕೆ ಏರಿಕೆ ಕಂಡಿದ್ದು, ಸೋಮವಾರ ಅರಸೀಕೆರೆ ಮೂಲದ 82ರ ವೃದ್ಧೆಯೊಬ್ಬರು ಮೃಪಟ್ಟಿದ್ದಾರೆ.
ತೀವ್ರ ಉಸಿರಾಟದ ತೊಂದರೆಯಿಂದ ಬಳುತ್ತಿದ್ದ ಅವರಲ್ಲಿ ಇತ್ತೀಚೆಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಮೃತ ವೃದ್ಧೆಯ ಅಂತ್ಯ ಸಂಸ್ಕಾರವನ್ನು ಸರ್ಕಾರದ ನಿಯಮಾವಳಿಯಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss