Friday, August 12, 2022

Latest Posts

ಹಾಸನ ಜಿಲ್ಲೆಯಲ್ಲಿ 137 ಮಂದಿಗೆ ಕೋವಿಡ್-19 ಪ್ರಕರಣ ಪತ್ತೆ, 88 ಮಂದಿ ಆಸ್ಪತ್ರೆಯಿಂದ ಬಿಡುಗಡೆ

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 137 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 2872 ಕ್ಕೆ ಏರಿಕೆಯಾಗಿದೆ. ಇಂದು 88 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 1190 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ ಸಕ್ರಿಯ 1607 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 39 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಇಂದು ಇಬ್ಬರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಇದುವರೆಗೆ ಒಟ್ಟು 75 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಬೇಲೂರು ತಾಲ್ಲೂಕಿನ 50 ವರ್ಷದ ಮಹಿಳೆ ಉಸಿರಾಟ ತೊಂದರೆ, ಸಕ್ಕರೆ ಕಾಯಿಲೆ ಹಾಗೂ ಕಿಡ್ನಿ ತೊಂದರೆಯಿಂದ ಬಳಲುತಿದ್ದು ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ ಹಾಗೂ 62 ವರ್ಷದ ವ್ಯಕ್ತಿ ಹೊಳೆನರಸೀಪುರ ತಾಲ್ಲೂಕಿನವರಾಗಿದ್ದು ಉಸಿರಟದ ತೊಂದರೆಯಿಂದ ಬಳಲುತ್ತಿದ್ದು ಕೋವಿಡ್ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.
ಇಂದು ಪತ್ತೆಯಾದ 137 ಪ್ರಕರಣಗಳಲ್ಲಿ 9 ಜನ ಅರಸೀಕೆರೆ ತಾಲ್ಲೂಕಿನವರು, 10 ಮಂದಿ ಚನ್ನರಾಯಪಟ್ಟಣ ತಾಲ್ಲೂಕಿನವರು, 82 ಜನ ಹಾಸನ ತಾಲ್ಲೂಕು, 7 ಜನ ಹೊಳೆನರಸೀಪುರ ತಾಲ್ಲೂಕು, 21 ಜನ ಅರಕಲಗೂಡು ತಾಲ್ಲೂಕು, 4 ಜನ ಬೇಲೂರು ತಾಲ್ಲೂಕಿನವರು, ಸಕಲೇಶಪುರ ತಾಲ್ಲೂಕಿನಲ್ಲಿ 3 ಜನ ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss