Tuesday, August 16, 2022

Latest Posts

ಹಾಸನ ಜಿಲ್ಲೆಯಲ್ಲಿ 18 ಹೊಸ ಕೋವಿಡ್-19 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 271ಕ್ಕೆ ಏರಿಕೆ

ಹಾಸನ:  ಜಿಲ್ಲೆಯಲ್ಲಿಂದು ಹೊಸದಾಗಿ 18 ಕೋವಿಡ್-19 ಪ್ರಕರಣ ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 271ಕ್ಕೆ ಏರಿಕೆಯಾಗಿದೆ. 192 ಮಂದಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಹಾಗೂ 78 ಮಂದಿ ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು. ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾದವರನ್ನು 7 ದಿನಗಳ ನಂತರ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ ಪಾಸಿಟೀವ್ ವರದಿ ಬಂದರೆ ಅವರನ್ನು ಆಸ್ಪತೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತದೆ ನೆಗಿಟೀವ್ ಬಂದವರನ್ನು ಮನೆಗೆ ಕಳುಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಹೊಸದಾಗಿ ಬಂದ 18 ಪ್ರಕರಣಗಳಲ್ಲಿ 4 ಮಂದಿ ಹಾಸನ ಜಿಲ್ಲೆಗೆ ಸೇರಿದವರಾಗಿದ್ದಾರೆ. ಇನ್ನುಳಿದ 14 ಮಂದಿ ಚನ್ನರಾಯಪಟ್ಟಣ ತಾಲ್ಲೂಕಿಗೆ ಸೇರಿದವರಾಗಿದ್ದು, ಅವರಲ್ಲಿ ಒಬ್ಬರು ಶಾಸಕೋಶದ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದವರು ಹಾಗೂ ಇನ್ನಳಿದ ಎಲ್ಲರೂ ಮುಂಬೈನಿಂದ ಬಂದ ಹಿನ್ನಲೆಯನ್ನು ಹೊಂದಿರುವವರಾಗಿದ್ದಾರೆ ಎಂದು ಆರ್. ಗಿರೀಶ್ ಮಾಹಿತಿ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss