Thursday, August 11, 2022

Latest Posts

ಹಾಸನ ಜಿಲ್ಲೆಯಲ್ಲಿ 202 ಮಂದಿಯಲ್ಲಿ ಕೊರೋನಾ ಸೋಂಕು ದೃಢ

ಹಾಸನ: ಜಿಲ್ಲೆಯಲ್ಲಿ ಕೊರೋನಾ ರಣಕೇಕೆ ಮುಂದುವರೆದಿದ್ದು, ಸೋಮವಾರ 6 ಮಂದಿ ಕೋವಿಡ್ ಗೆ ಪ್ರಾಣತೆತ್ತಿದ್ದಾರೆ.
ಈ ಮೂಲಕ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 165ಕ್ಕೆ ಏರಿಕೆಯಾಗಿದ್ದು, 202 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.
ಒಟ್ಟು ಸೋಂಕಿತರ ಸಂಖ್ಯೆ 6172ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಪೈಕಿ 4097 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1910 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಸೋಮವಾರ ಸೋಂಕು ದೃಢಪಟ್ಟವರ ಪೈಕಿ ಹಾಸನ ತಾಲ್ಲೂಕಿನಲ್ಲಿ 81, ಅರಸೀಕೆರೆ 29, ಹೊಳೆನರಸೀಪುರ 11, ಚನ್ನರಾಯಪಟ್ಟಣ 18,ಆಲೂರು 12 ಅರಕಲಗೂಡು 22 ಬೇಲೂರು 16 ,ಸಕಲೇಶಪುರದ 12 ಜನರಿಗೆ ಸೋಂಕು ಕಾಣಿಸಿಕೊಂಡಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss