Sunday, June 26, 2022

Latest Posts

ಹಾಸನ: ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಹಾಸನ: ಇತ್ತೀಚಿಗೆ ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ವೇಳೆ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ನಡೆದ ಹಲ್ಲೆ ಘಟನೆ ಖಂಡಿಸಿ ಹಾಸನದಲ್ಲೂ ಪತ್ರಕರ್ತರು ಮೌನ ಪ್ರತಿಭಟನೆ‌ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯ‌ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಟಿ.ವಿ.ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷರಾದ ಎಸ್.ಆರ್.ಪ್ರಸನ್ನಕುಮಾರ್ ಅವರ ನೇತೃತ್ವದಲ್ಲಿ ಸಂಘದ ಆವರಣದಿಂದ ಹೊರಟ ಮೆರವಣಿಗೆಯಲ್ಲಿ 50 ಕ್ಕೂ ಹೆಚ್ಚು ಪತ್ರಕರ್ತರು‌ ಭಾಗವಹಿಸಿ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಅವರಿಗೆ ಮನವಿ ಸಲ್ಲಿಸಿದರು.

ಗಲಭೆಯಲ್ಲಿ ಹಲ್ಲೆ ಮಾತ್ರವಲ್ಲದೆ, ಕೆಲ ಪತ್ರಕರ್ತರ ವಾಹನಗಳನ್ನೂ ಜಖಂ ಮಾಡಿರುವುದು ವಿಷಾದನೀಯ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಜರುಗಿಸಬೇಕು ಎಂದು ಒತ್ತಾಯಿಸಿದರು. ಈ ವೇಳೆ ರಾಜ್ಯ‌ಕಾರಿ ಸಮಿತಿ‌ ಸದಸ್ಯ ರವಿನಾಕಲಗೂಡು, ರಾಷ್ಟ್ರೀಯ ಮಂಡಳಿ‌ಸದಸ್ಯ ಅತೀಖುರ್ ರೆಹಮಾನ್, ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹಿಂದೂ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಕೆ.ಜಿ.ಸುರೇಶ್, ನಗರ ಕಾರ್ಯದರ್ಶಿ ಸಿ.ಬಿ.ಸಂತೋಷ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು, ಸಂಪಾದಕರು, ಮಾಜಿ‌‌ ಅಧ್ಯಕ್ಷರು ಮತ್ತು ಸದಸ್ಯರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss