Thursday, June 30, 2022

Latest Posts

ಹಾಸನ| ಮುಂಬೈನಿಂದ ಅರಸೀಕೆರೆ ಮಾರ್ಗವಾಗಿ ಚನ್ನರಾಯಪಟ್ಟಣಕ್ಕೆ ಪ್ರಯಾಣ ಬೆಳೆಸಿದ್ದ ಐವರಲ್ಲಿ ಕೊರೋನಾ ದೃಢ,

ಹಾಸನ: ಮೇ.10ರಂದು ಮುಂಬೈನಿಂದ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿಗೆ ಪ್ರಯಾಣ ಬೆಳೆಸಿದ್ದ ಎರಡು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಹಾಗೂ ಇವರೊಟ್ಟಿಗೆ ಪ್ರಯಾಣ ಬೆಳೆಸಿದ್ದ ವ್ಯಕ್ತಿ ಸೇರಿದಂತೆ ಒಟ್ಟು ಐವರಲ್ಲಿ ಕೊರೋನಾ ಇರುವುದು ದೃಢವಾಗಿದೆ.
ಸೋಂಕಿತರು ಮುಂಬೈನಿಂದ ಅರಸೀಕೆರೆ ಮಾರ್ಗವಾಗಿ ಚನ್ನರಾಯಪಟ್ಟಣಕ್ಕೆ ಪ್ರಯಾಣ ಬೆಳೆಸಿದ್ದರು ಎನ್ನುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿದ್ದು, ಮೇ.11ರಂದು ಎಲ್ಲರನ್ನು ಜಿಲ್ಲಾಸ್ಪತ್ರೆಯಲ್ಲಿ ಕೊವೀಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಸೋಂಕಿತರ ಪ್ರಾಥಮಿಕ ಮತ್ತು ಸೆಕೆಂಡರಿ ಕಾಂಟಾಕ್ಟ್ ಆಧರಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದ್ದು,ಟ್ರಾವೆಲ್ ಹಿಸ್ಟರಿ ಪಡೆಯಲಾಗುತ್ತಿದೆ.ಸೋಂಕಿತರು ಚನ್ನರಾಯಪಟ್ಟಣದಿಂದ ನೇರವಾಗಿ ಆಸ್ಪತ್ರೆಗೆ ಬಂದಿದ್ದು, ತಮ್ಮ ಗ್ರಾಮಕ್ಕೆ ಹೋಗಿಲ್ಲ ಎಂಬ ವಿಷಯ ಸದ್ಯಕ್ಕೆ ನೆಮ್ಮದಿ ತಂದಿದೆ.
ಮೇ.10ರಂದು ಜಿಲ್ಲೆಗೆ ಮಹಾರಾಷ್ಟ್ರದಿಂದ ಎರಡು ಕಾರುಗಳು ಬಂದಿದ್ದು, ಮತ್ತೊಂದು ಕಾರಿನಲ್ಲಿ ಬಂದವರ ಪತ್ತೆಗೆ ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸೋಂಕು ಕಂಡು ಬಂದಿರುವ ಹಿನ್ನಲೆಯಲ್ಲಿ ಅಗತ್ಯ ಮುಂಜಾಗೃತಾ ಕ್ರಮ ವಹಿಸಲಾಗುವುದು ಹಾಗೂ ಹೊರ ಪ್ರದೇಶಗಳಿಂದ ಬಂದಿರುವ ಎಲ್ಲರ ಗಂಟಲ ದ್ರವ ಪರೀಕ್ಷೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss