ಹೊಸದಿಗಂತ ವರದಿ,ಹಾಸನ:
ಇಲ್ಲಿನ ಚನ್ನರಾಯಪಟ್ಟಣ ನಗರದ ಹೊರವಲಯಲ್ಲಿ ನರ್ಮಿಸುತ್ತಿರುವ ವಿದ್ಯಾರ್ಥಿಗಳ ವಸತಿ ನಿಲಯದ ಕಟ್ಟಡ ಕಾಮಗಾರಿಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಪರಿಶೀಲಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸುತ್ತಿರುವ ವಿದ್ಯಾರ್ಥಿಗಳ ವಸತಿ ನಿಲಯದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿ, ಕಟ್ಟಡದ ಗುಣಮಟ್ಟವನ್ನು ಕಾಯ್ದುಕೊಂಡು ವೇಗವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಈ ವೇಳೆಯಲ್ಲಿ ಶಾಸಕರಾದ ಸಿ.ಎನ್. ಬಾಲಕೃಷ್ಣ ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಹರ್ಷ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.