Monday, August 15, 2022

Latest Posts

ಹಾಸ್ಟೇಲ್, ಆಶ್ರಮ ಶಾಲೆ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ ಕಾರ್ಮಿಕರಿಗೆ ವೇತನ ನೀಡಲು ಆಗ್ರಹಿಸಿ ಪ್ರತಿಭಟನೆ

ಮೈಸೂರು: ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಗಳ ವ್ಯಾಪ್ತಿಯ ಹಾಸ್ಟೇಲ್, ಆಶ್ರಮ ಶಾಲೆ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ ಕಾರ್ಮಿಕರಿಗೆ, ಲಾಕ್ ಡೌನ್ ಅವಧಿಯ ವೇತನ ಮತ್ತು ಜೂನ್ ತಿಂಗಳಿನಿ0ದ ವೇತನ ಪಾವತಿಸಿ ಕೆಲಸ ನೀಡುವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ಕಾರ್ಮಿಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಸರ್ಕಾರದ ವಿವಿಧ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಹಾಸ್ಟೇಲ್ ,ಆಶ್ರಮ ಶಾಲೆಗಳು ಮತ್ತು ವಸತಿಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಳೆದ ೧೭-೧೮ವರ್ಷಗಳಿಂದಲೂ ೨೫-೩೦ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕೇವಲ ಕನಿಷ್ಟ ಕೂಲಿ ಪಡೆದು ಸರ್ಕಾರಕ್ಕೆ ಮಹತ್ವದ ಸೇವೆ ಸಲ್ಲಿಸುತ್ತ ಬಂದಿದ್ದಾರೆ.

ಕೊರೋನಾ ಲಾಕ್ ಡೌನ್ ಪ್ರಾರಂಭವಾದಾಗಿನಿAದ ಹೊರಗುತ್ತಿಗೆ ಕಾರ್ಮಿಕರು ಕೆಲಸವಿಲ್ಲದೆ, ವೇತನವೂ ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಕುಟುಂಬಗಳು ಬೀದಿಗೆ ಬರುವಂತಾಗಿದೆ. ಇತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್ ಡೌನ್ ಅವಧಿಯಲ್ಲಿ ವೇತನ ನೀಡಬೇಕೆಂದು ಸ್ಪಷ್ಟ ಆದೇಶವಿದ್ದರೂ, ಜಿಲ್ಲಾಮಟ್ಟದಲ್ಲಿ ಮೇಲಿನ ಇಲಾಖೆಗಳ ಅಧಿಕಾರಿಗಳು ಇನ್ನೂ ಸಹ ಪಾವತಿ ಮಾಡಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಕೊರೋನಾ ಸಂಕಷ್ಟದ ಸಮಯದಲ್ಲಿ ಕಾರ್ಮಿಕರಿಗೆ ಸಹಾಯವಾಗಲೆಂದು ಪಿಎಫ್ ಮತ್ತು ಇಎಸ್‌ಐ ಸಂಸ್ಥೆಗಳಿoದ ಹಲವಾರು ವಿಶೇಷ ಸೌಲಭ್ಯಗಳನ್ನು ಘೋಷಿಸಿದ್ದರೂ, ಕಾರ್ಮಿಕರ ಬಳಿ ಸೂಕ್ತ ದಾಖಲೆಗಳಿಲ್ಲದ ಕಾರಣ, ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅದಕ್ಕಾಗಿ ಲಾಕ್ ಡೌನ್ ಅವಧಿ ವೇತನವನ್ನು ಎಲ್ಲಾ ಹೊರಗುತ್ತಿಗೆ ಕಾರ್ಮಿಕರಿಗೆ ಈ ಕೂಡಲೇ ಪಾವತಿಸಬೇಕು. ಜೂನ್ ತಿಂಗಳಿನ ವೇತನ ಪಾವತಿ ಮಾಡಿ ಕಾರ್ಮಿಕರಿಗೆ ಕೆಲಸವನ್ನು ನೀಡಬೇಕು. ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಲು ಇಎಸ್ ಐ ಮತ್ತು ಇಪಿಎಫ್ ನ್ನು ಪಾವತಿ ಮಾಡಿರುವ ದಾಖಲೆಗಳನ್ನು ಕಾರ್ಮಿಕರಿಗೆ ಒದಗಿಸಬೇಕು. ಇಲ್ಲವೇ ಇಲಾಖೆಯಿಂದಲೇ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಕರ ಮೇಟಿ, ಲೋಕೇಶ್, ಮಹದೇವಮ್ಮ, ವಿಜಯ್ ಕುಮಾರ್, ಸುನಂದಮ್ಮ, ರೇಖಾ, ಸೀಮಾವತಿ, ಪವಿತ್ರ, ರಾಜೇಶ್ವರಿ, ಶಶಿಕಲಾ, ಲತಾ, ರಾಜೇಶ್, ರವಿ, ಎಂ.ವಿ.ಲೋಕೇಶ್, ಸೌಭಾಗ್ಯ, ಕೌಸಲ್ಯ, ಗೀತಾ, ಚಿಕ್ಕಲಕ್ಷಿ÷್ಮ, ಶಿವಕುಮಾರ್ ಸೇರಿದಂತೆ ಹಲವು ಮಂದಿ ಪಾಲ್ಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss