Thursday, July 7, 2022

Latest Posts

ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆಪ್ ಬಿಡುಗಡೆ

ಹೊಸ ದಿಗಂತ ವರದಿ, ಹಾವೇರಿ:

ಕರ್ನಾಟಕ ಸರ್ಕಾರ ಇ-ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದೊಂದಿಗೆ 2020-21ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆಪ್ ಬಿಡುಗಡೆ ಮಾಡಲಾಗಿದೆ. ರೈತರು ಹೆಚ್ಚಿನ ಆಸಕ್ತಿಯಿಂದ ಈ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರು ತಾವೇ ಖುದ್ದಾಗಿ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.
ರೈತರು ಗೂಗಲ್ ಪ್ಲೇಸ್ಟೋರ್‌ನಿಂದ ಹಿಂಗಾರು ರೈತರ ಬೆಳೆ ಸಮೀಕ್ಷೆ 2020-21 ಆಪ್ ಡೌನ್‌ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಇದೇ ದಿ.31 ರೊಳಗೆ ಅಪ್‌ಲೋಡ್ ಮಾಡಬೇಕು. ಈ ಮಾಹಿತಿಯನ್ನು ಬೆಳೆವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಯಡಿ ಸವಲತ್ತುಗಳನ್ನು ಒದಗಿಸಲು ಖಖಿಅಯಲ್ಲಿ ಅಳವಡಿಸಲು ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಬೆಳೆ ವಿವರಗಳನ್ನು ಅಪ್‌ಲೋಡ್ ಮಾಡದಿದ್ದಲ್ಲಿ ಇಲಾಖೆಗಳಿಂದ ದೊರೆಯುವ ಸವಲತ್ತುಗಳಿಂದ ವಂಚಿತರಾಗುವಿರಿ ಎಂದು ಸ್ಪಷ್ಟಪಡಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಬೆಳೆ ಮಾಹಿತಿಯನ್ನು ದಾಖಲಿಸಲು ಕೋರಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss