ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ರಾಜ್ಯ ಸರ್ಕಾರದ ನಿರ್ಧಾರ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಲೀಗಲ್ ತಂಡ ಮತ್ತು ಅಧಿಕಾರಿಗಳ ಜೊತೆಗೆ ಚರ್ಚಿಸಿ ಸೂಕ್ತವಾದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಚುನಾವಣೆಗೆ ಮೊದಲು ಕೂಡ ತಮ್ಮ ಪಕ್ಷ ಹಿಜಾಬ್ ನಿಷೇಧವನ್ನು ವಿರೋಧಿಸಿತ್ತು ಎಂದು ಸಚಿವರು ಹೇಳಿದರು.
ನಿನ್ನೆ ಮೈಸೂರಲ್ಲಿ ಪ್ರಶ್ನೆಯೊಂದಕ್ಕೆ ಮುಖ್ಯಮಂತ್ರಿ ನಿಮ್ಮ ಸಂಪ್ರದಾಯ ಹಾಗೂ ಪದ್ಧತಿಗಳನ್ನು ಆಚರಿಸಲು ಯಾವುದೇ ಅಡ್ಡಿಯಿಲ್ಲ ಅಂತ ಹೇಳಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು. ಬಿಜೆಪಿ ಚುನಾವಣೆ ಹತ್ತಿರ ಬಂದಾಗ ಪರೇಶ್ ಮೇಸ್ತಾ, ಹಿಜಾಬ್ ನಂಥ ವಿಷಯಗಳನ್ನು ಬಿಜೆಪಿ ಮುನ್ನೆಲೆಗೆ ತರುತ್ತದೆ. ಬಿಜೆಪಿಯವರಿಗೆ ಉತ್ತರಿಸುವ ಅವಶ್ಯಕತೆ ತಮಗಿಲ್ಲ ಎಂದರು.