ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮಂಗಳವಾರವೂ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತವಾಗಿದ್ದು, ಶ್ರೀನಗರದಲ್ಲಿ ಇಂದು ಕೂಡ ವಿಮಾನ ಸಂಚಾರ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಈ ಬಗ್ಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಹವಾಮಾನದಲ್ಲಿ ಸುಧಾರಣೆಯಾದರೆ ವಿಮಾನ ಸೇವೆ ಆರಂಭಿಸುತ್ತೇವೆ. ರನ್ವೇಯಿಂದ ಹಿಮವನ್ನು ತೆರವುಗೊಳಿಸಲಾಗಿದೆ. ಆದರೆ ಹಿಮಪಾತದಿಂದಾಗಿ ವಾಯು ಮಾರ್ಗವು ಸ್ಷಷ್ಟವಾಗಿ ಗೋಚರಿಸುತ್ತಿಲ್ಲ. ಹಾಗಾಗಿದ ವಿಮಾನ ಹಾರಾಟ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದಿದ್ದಾರೆ.
ಕಾಶ್ಮೀರದಲ್ಲಿ ಹಿಮಪಾತದಿಂದಾಗಿ ರಸ್ತೆಗಳಲ್ಲಿ ವಾಹನ ಸಂಚಾರವೂ ಅಸ್ತವ್ಯಸ್ತವಾಗಿದೆ. ಹೆದ್ದಾರಿಗಳಲ್ಲಿ 4500ಕ್ಕೂ ಹೆಚ್ಚು ವಾಹನಗಳು ಸಿಲುಕಿಕೊಂಡಿವೆ. ಎಂದು ಸಂಚಾರ ನಿಯಂತ್ರಣ ವಿಭಾಗದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.