ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಾಂತಕುಮಾರ್ ಅವರ ಪತ್ನಿ ಸಂತೋಷ್ ಶೈಲ್ಜಾ ಅವರು ಇಂದು ಬೆಳಗಿನ ಜಾವ ಕೊರೋನಾ ಸೋಂಕಿನಿಂದ ನಿಧನರಾಗಿದ್ದಾರೆ.
ಈ ಬಗ್ಗೆ ಆರೋಗ್ಯ ಸಚಿವ ರಾಜೀವ್ ಸೈಝಾಲ್ ಮಾಹಿತಿ ನೀಡಿದ್ದು, ಶೈಲಜಾ ಅವರಿಗೆ ಕೆಲ ದಿನಗಳ ಹಿಂದೆ ಕೊರೋನಾ ಸೋಂಕು ದೃಢಪಟ್ಟಿದ್ದರಿಂದ ರಾಜ್ಯದ ಕಾಂಗ್ರಾ ಜಿಲ್ಲೆಯ ಡಾ.ರಾಜೇಂದ್ರ ಪ್ರಸಾದ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.