Wednesday, August 17, 2022

Latest Posts

ಹಿರಿಯ ಛಾಯಾಗ್ರಾಹಕ ಅಮರ್ ದಾಸ್ ನಿಧನ

ಮೈಸೂರು: ಹಿರಿಯ ಪತ್ರಿಕಾ ಛಾಯಾಗ್ರಾಹಕ ಡಿ.ಎಚ್.ಅಮರ್‌ದಾಸ್ (೮೩) ಭಾನುವಾರ ಮುಂಜಾನೆ ೩ ಗಂಟೆ ಸಮಯದಲ್ಲಿ ಮೈಸೂರಿನಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಬಾಂಬೆಯ ಸೆಂಟ್ ಕ್ಷೇವಿಯರ್ ಕಾಲೇಜಿನಲ್ಲಿ ಫೋಟೋಗ್ರಫಿ ಡಿಪ್ಲೊಮಾ ಮಾಡಿ, ೧೯೫೬ರಲ್ಲಿ ಮೈಸೂರಿಗೆ ಹಿಂದಿರುಗಿದರು. ಹವ್ಯಾಸಿ ಛಾಯಾಗ್ರಾಹಕರಾಗಿ ಮೈಸೂರಿನ ಹಲವಾರು ಘಟನಾವಳಿಗಳ ಅಪರೂಪದ ಛಾಯಾಚಿತ್ರಗಳನ್ನು ಸಂಗ್ರಹಿಸಿದ್ದರು. ಸುಧರ್ಮ, ಡೆಕ್ಕನ್ ಹೆರಾಲ್ಡ್ ಮುಂತಾದ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಮೃತರು ಪತ್ನಿ ಆಶಾ ದಾಸ್, ಮಕ್ಕಳಾದ ಪ್ರೀತಿ, ಜ್ಯೋತಿ, ನಿತಿನ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೈಸೂರಿನ ವಿಜಯನಗರದಲ್ಲಿರುವ ಚಿತಾಗಾರದಲ್ಲಿ ಮೃತರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!