Thursday, August 11, 2022

Latest Posts

ಹಿರಿಯ ಸಾಹಿತಿ ಡಾ. ಜಿ.ಎಸ್. ಆಮೂರ ನಿಧನ: ಸಿಎಂ ಯಡಿಯೂರಪ್ಪ ಸಂತಾಪ

ಬೆಂಗಳೂರು: ಹಿರಿಯ ಸಾಹಿತಿ, ವಿಮರ್ಶಕ ಡಾ.ಜಿ.ಎಸ್. ಆಮೂರ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಆಮೂರ ಅವರು ಆಧುನಿಕ ಕನ್ನಡ ಸಾಹಿತ್ಯ ವಿಮರ್ಶಕರಲ್ಲಿ ಅಗ್ರಮಾನ್ಯರಾಗಿದ್ದರು. ಇವರಿಗೆ ಕೇಂದ್ರ ಸಾಹಿತ್ಯ ಪ್ರಶಸ್ತಿ, ಪಂಪ ಪ್ರಶಸ್ತಿ ಸಂದಿದೆ. ಅವರಿಗೆ ನೃಪತುಂಗ ಪ್ರಶಸ್ತಿ ಘೋಷಿಸಲಾಗಿತ್ತು. ಆದರೆ ಪ್ರಶ್ಸ್ತಿ ಸ್ವೀಕಾರಕ್ಕೂ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ. ಸಾಹಿತ್ಯ ಲೋಕದ ಪ್ರಮುಖ ಕೊಂಡಿ ಕಳಚಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ, ಶಿಷ್ಯವೃಂದಕ್ಕೆ ನೋವನ್ನು ಭರಿಸುವ ಶಕ್ತಿ ಆ ಭಗವಂತ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss