Sunday, June 26, 2022

Latest Posts

ಹುಟ್ಟೂರಿನಲ್ಲಿಯೇ ಅಹ್ಮದ್ ಪಟೇಲ್ ಅಂತ್ಯಕ್ರಿಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ನಿನ್ನೆ ನಿಧನರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್‌ ಗ್ರಾಮದಲ್ಲಿ ನಡೆಯಿತು.

ಗುಜರಾತ್ ಕಾಂಗ್ರೆಸ್ ವಕ್ತಾರ ಮನೀಶ್ ದೋಶಿ ಹೇಳಿರುವಂತೆ ಅಹ್ಮದ್ ಪಟೇಲ್ ಅವರ ಆಶಯಕ್ಕೆ ಅನುಗುಣವಾಗಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿ, ಅವರ ತಾಯಿಯ ಗೋರಿ ಪಕ್ಕದಲ್ಲೇ ಅವರನ್ನೂ ದಫನ್ ಮಾಡಲಾಗಿದೆ.

ಅಂತ್ಯಕ್ರಿಯೆಯಲ್ಲಿ ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ ಸೇರಿದಂತೆ ವಿವಿಧ ಗಣ್ಯರು  ಪಾಲ್ಗೊಂಡರು. ರಾಹುಲ್ ಗಾಂಧಿ, ಮಾಜಿ ಸಂಸದರ ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಿದರು.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss