Friday, August 19, 2022

Latest Posts

ಹುಬ್ಬಳ್ಳಿ| ಅಂತಾರಾಜ್ಯ ಬಸ್ ಸಂಚಾರ ಶೀಘ್ರ ಆರಂಭ

ಹುಬ್ಬಳ್ಳಿ : ಹುಬ್ಬಳ್ಳಿಯಿಂದ ಅಂತಾರಾಜ್ಯ ಬಸ್ಸುಗಳ ಸಂಚಾರವನ್ನು ಆರಂಭಿಸಲು ವಾಕರಸಾಸಂಸ್ಥೆ ಹುಬ್ಬಳ್ಳಿ ವಿಭಾಗದಲ್ಲಿ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿರುತ್ತದೆ. ಈ ಬಗ್ಗೆ ನಿರ್ದೇಶನ ಬಂದ ಕೂಡಲೆ ಮಾರ್ಗಸೂಚಿ ನಿರ್ದೇಶನಗಳ ಪ್ರಕಾರ ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳ ಕಾರ್ಯಾಚರಣೆಯನ್ನು ಮರು ಪ್ರಾರಂಭ ಮಾಡಲಾಗುತ್ತದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಲಾಕ್ ಡೌನ್ ಪೂರ್ವದಲ್ಲಿ ಹುಬ್ಬಳ್ಳಿ ವಿಭಾಗದಿಂದ ಮಹಾರಾಷ್ಟ್ರಕ್ಕೆ 38, ಗೋವಾ 11, ತೆಲಂಗಾಣ12, ತಮಿಳುನಾಡು 2 ಹಾಗೂ ಆಂಧ್ರಪ್ರದೇಶಕ್ಕೆ 2 ಒಟ್ಟು 65 ಬಸ್ಸುಗಳು ಸಂಚರಿಸುತ್ತಿದ್ದವು.
ಮುಂಬೈ, ಶಿರಡಿ,ಪಿಂಪ್ರಿ, ಹೈದರಾಬಾದ್, ಚೆನ್ನೈ, ಸೋಲಾಪುರ ಮುಂತಾದ ಪ್ರಮುಖ ಸ್ಥಳಗಳಿಗೆ ವೋಲ್ವೊ, ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್ ಹಾಗೂ ರಾಜಹಂಸ ಸೇರಿದಂತೆ 26 ಪ್ರತಿಷ್ಟಿತ ಐಶಾರಾಮಿ ಬಸ್ಸುಗಳು ಸಂಚರಿಸುತ್ತಿದ್ದವು.
ಇವುಗಳೊಂದಿಗೆ ಮುಂಬೈ, ಪೂನಾ,ಬೊರಿವಿಲಿ, ಪಣಜಿ,ವಾಸ್ಕೋ, ಮಡಗಾಂವ, ಔರಂಗಾಬಾದ್, ಇಚಲಕರಂಜಿ, ಮೀರಜ, ಸೋಲಾಪುರ,ಬಾರ್ಶಿ, ಮಂತ್ರಾಲಯ, ಹೈದರಾಬಾದ್ ಮತ್ತಿತರ ಸ್ಥಳಗಳಿಗೆ 39 ವೇಗದೂತ ಬಸ್ಸುಗಳನ್ನು ಸಹಾ ಕಾರ್ಯಾಚರಣೆ ಮಾಡಲಾಗುತ್ತಿತ್ತು.
ಕೊರೋನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಯಾವ ಮಾರ್ಗಗಳಲ್ಲಿ ಯಾವ ಬಗೆಯ ಮತ್ತು ಎಷ್ಟು ಬಸ್ಸುಗಳನ್ನು ಕಾರ್ಯಾಚರಣೆ ಮಾಡಬೇಕು ಎಂಬ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!