Tuesday, August 9, 2022

Latest Posts

ಹುಬ್ಬಳ್ಳಿ| ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ : ಶೃಂಗಾರಗೊಂಡ ಕೇಶವ ಕುಂಜ

ಹುಬ್ಬಳ್ಳಿ: ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ನಡೆಯುವ ಹಿನ್ನೆಲೆಯಲ್ಲಿ ಮಂಗಳವಾರ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೇಶವ ಕುಂಜವನ್ನು ವಿದ್ಯುತ್ ದೀಪಾಲಂಕಾರದಿಂದ ಶೃಂಗರಿಸಲಾಗಿತ್ತು.
ಬುಧವಾರ ವಿವಿಧ ಕಾರ್ಯಕ್ರಮ ಗಳನ್ನು ಆಯೋಜಿಸಲಾಗಿದೆ. ಬೆಳಗ್ಗೆ ಶ್ರೀರಾಮನ ಭಜನೆ, ಪೂಜೆ. ಸಂಜೆ ದೀಪೋತ್ಸವ ನಡೆಯಲಿದೆ.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕ ಸು.ರಾಮಣ್ಣ ,
ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ, ಇತರ ಪ್ರಚಾರಕರು ಮತ್ತು ಹುಬ್ಬಳ್ಳಿ ಮಹಾನಗರದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss