ಹುಬ್ಬಳ್ಳಿ ಕಿಮ್ಸ್‌ನಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರ ಕಾರ್ಯಾರಂಭ

0
62

ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರ ಆರಂಭಿಸಲು ಐ.ಸಿ.ಎಂ.ಆರ್. (ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸೆಂಟರ್) ಒಪ್ಪಿಗೆ ನೀಡಿದ ಹಿನ್ನೆಲೆಯುಲ್ಲಿ ಬುಧವಾರ ಹುಬ್ಬಳ್ಳಿ ಕಿಮ್ಸ್ ಕೋವಿಡ್-೧೯ ಪರೀಕ್ಷಾ ಕೇಂದ್ರ ಕಾರ್ಯಾರಂಭ ಮಾಡಿದೆ.
ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಜಗದೀಶ ಶೆಟ್ಟರ ಸುದ್ದಿಗಾರರೊಂದಿಗೆ ಮಾತನಾಡಿ, ಇಂದಿನಿಂದ ಕಿಮ್ಸ್‌ನಲ್ಲಿ ಸಾರ್ಸ್ ಕೋ ವಿ-೨ ವೈರಾಣು ಪತ್ತೆ ಪರೀಕ್ಷೆ ಮಾಡಲಾಗುತ್ತದೆ. ಇದರಿಂದ ಅನೇಕ ಜಿಲ್ಲೆಗಳಿಗೆ ಅನುಕೂಲವಾಗಲಿದೆ ಎಂದರು.
ಕಿಮ್ಸ್ ನಲ್ಲಿ ಪರೀಕ್ಷಾ ಕೇಂದ್ರ ಆರಂಭಿಸಿರುವುದರಿಂದ 24 ಗಂಟೆಗಳಲ್ಲೇ ಕೊರೋನಾ ಪರೀಕ್ಷಾ ವರದಿ ದೊರಕಲಿದೆ. ಬೆಂಗಳೂರು ಹಾಗೂ ಶಿವಮೊಗ್ಗಕ್ಕೆ ಮಾದರಿಗಳನ್ನು ಕಳುಹಿಸಿ ವರದಿಗಾಗಿ ಕಾಯುವುದು ತಪ್ಪಿದೆ. ದಿನ ಒಂದಕ್ಕೆ ೪೦ ಮಾದರಿಗಳನ್ನು ಪರೀಕ್ಷೆ ಮಾಡಬಹುದಾಗಿದೆ.
ಕಿಮ್ಸ್ ನಿರ್ದೇಶಕರು ಸ್ವಯಂ ಚಾಲಿತ ಆರ್.ಎನ್.ಎ ಎಕ್ಸಟ್ರಾಕ್ಟ್ ಯಂತ್ರಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಯಂತ್ರವನ್ನು ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿದರೆ ೧೦೦ ಮಾದರಿಗಳನ್ನು ದಿನವೊಂದಕ್ಕೆ ಪರೀಕ್ಷೆ ಮಾಡಬಹುದು. ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ. ಒಂದೆರೆಡು ದಿನಗಳಲ್ಲಿ ಬೆಳಗಾವಿಯಲ್ಲೂ ಕೋವಿಡ್-19 ಪರೀಕ್ಷಾ ಕೇಂದ್ರ ಆರಂಭಿಸಲಾಗುವುದು. ಇದಕ್ಕೂ ಐ.ಸಿ.ಎಂ.ಆರ್. ಒಪ್ಪಿಗೆ ನೀಡಲಿದೆ.
ಹುಬ್ಬಳ್ಳಿಯಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರವನ್ನು ಆರಂಭಿಸಿರುವುದರಿಂದ ಉತ್ತರ ಕರ್ನಾಟಕ ಜಿಲ್ಲೆಗಳ ವರದಿಗಳನ್ನು ಶೀಘ್ರವಾಗಿ ಪಡೆಯಬಹುದಾಗಿದೆ.
ಬೆಳಗಾವಿಯ ಚಿಕ್ಕೋಡಿಯಲ್ಲಿ ಕೊರೋನಾ ಸೋಂಕಿತರ ವಿವರ ಪಡೆಯಲು ಮನೆಗಳಿಗೆ ತೆರಳಿದ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಪ್ರಕರಣ ಗಮನಕ್ಕೆ ಬಂದಿದೆ. ಆಶಾ ಕಾರ್ಯಕರ್ತರಿಗೆ ಸಹಕಾರ ನೀಡದೆ ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

LEAVE A REPLY

Please enter your comment!
Please enter your name here