Monday, July 4, 2022

Latest Posts

ಹುಬ್ಬಳ್ಳಿ| ಕೋವಿಡ್ 19 ನೆಗೆಟಿವ್ ವರದಿ, ಪಿ- 363 ವ್ಯಕ್ತಿ ಗುಣಮುಖ ಆಸ್ಪತ್ರೆಯಿಂದ ಬಿಡುಗಡೆ

ಹುಬ್ಬಳ್ಳಿ: ಕೋವಿಡ್ 19 ನಿಂದ ಗುಣಮುಖರಾಗಿರುವ ಒಬ್ಬ ವ್ಯಕ್ತಿಯನ್ನು ಹುಬ್ಬಳ್ಳಿಯ ಕಿಮ್ಸ್ ನಿಂದ ಬಿಡುಗಡೆ ಮಾಡಲಾಗಿದೆ.
ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದ ಹುಬ್ಬಳ್ಳಿ ಕರಾಡಿ ಓಣಿಯ ಪಿ- 363 ( 63 ವರ್ಷ) ಇವರು ಸಂಪೂರ್ಣ ಗುಣಮುಖರಾಗಿದ್ದಾರೆ.24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಅವರು ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ 19 ನೆಗೆಟಿವ್ ವರದಿ ಬಂದಿದೆ. ಎಕ್ಸ್ ರೇ ಮೂಲಕ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದರಿಂದ ಇವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಇದುವರೆಗೆ 7 ಜನ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಸದ್ಯ ಜಿಲ್ಲೆಯ 5 ಜನ ಹಾಗೂ ಬಾಗಲಕೋಟ ಜಿಲ್ಲೆ ಬದಾಮಿಯ ಒಬ್ಬರು ಕಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss