Wednesday, August 10, 2022

Latest Posts

ಹುಬ್ಬಳ್ಳಿ| ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆಯಿರಿ: ರಾಜ್ಯ ಶಿವಸೇನಾ ಒತ್ತಾಯ

ಹುಬ್ಬಳ್ಳಿ: ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಸರ್ಕಾರ ಕೂಡಲೇ ರದ್ದುಪಡಿಸಬೇಕು ಎಂದು ಕರ್ನಾಟಕ ರಾಜ್ಯ ಶಿವಸೇನಾ ರಾಜ್ಯಾಧ್ಯಕ್ಷ ಕುಮಾರ ಹಕಾರಿ ಒತ್ತಾಯಿಸಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಯ್ದೆ ತಿದ್ದುಪಡಿಯಿಂದ ರೈತರಿಗೆ, ಸಣ್ಣ ಹಿಡುವಳಿದಾರರಿಗೆ ತೊಂದರೆಯಾಗುತ್ತದೆ, ತಿದ್ದುಪಡಿ ಕಾಯ್ದೆ ಕೂಡಲೇ ರದ್ದುಪಡಿಸಬೇಕು. ಸರ್ಕಾರ 8, 9, 10ನೇ ತರಗತಿಗೆ ಆನ್ಲೈನ್ ಶಿಕ್ಷಣ ನೀಡಲು ಮುಂದಾಗಬಾರದು ಎಂದರು.
ಸರ್ಕಾರ ಆನ್ಲೈನ್ ಶಿಕ್ಷಣ ನೀಡಲು ಮುಂದಾಗಬಾರದು. ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಇಲ್ಲವೇ 2021 ಜನೆವರಿಯಿಂದ ಶಾಲೆ ಪ್ರಾರಂಭಿಸಬೇಕು. ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಆರ್ಥಿಕವಾಗಿ ಸಬಲವಾಗಿಲ್ಲ. ಸರ್ಕಾರ ಖಾಸಗಿ ಶಾಲಾ ಶಿಕ್ಷಕರಿಗೆ ತಿಂಗಳಿಗೆ ಐದು ಸಾವಿರ ರೂ. ನೀಡಲು ಪ್ಯಾಕೇಜ್ ಘೋಷಿಸಬೇಕು ಎಂದರು.
ಸದ್ಯ ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಅಕಾರದಲ್ಲಿದ್ದು, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದ ಅವರು, ಶಿವಸೇನಾ ಕಾರವಾರ ಜಿಲ್ಲಾಧ್ಯಕ್ಷರನ್ನಾಗಿ ಹಳಿಯಾಳದ ವಿಷ್ಣು ವೆಂಕಪ್ಪಗೌಡರ, ಧಾರವಾಡ ನಗರಾಧ್ಯಕ್ಷರಾಗಿ ಸಿದ್ದುರಾವ್ ಭೋಸ್ಲೆ ಅವರನ್ನು ನೇಮಕ ಮಾಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅನ್ನಪ್ಪ ದೊಡ್ಡಮನಿ, ಸಿದ್ದುರಾವ್ ಭೋಸ್ಲೆ, ವಿಷ್ಣು ವೆಂಕಪ್ಪಗೌಡರ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss