Wednesday, August 17, 2022

Latest Posts

ಹುಬ್ಬಳ್ಳಿ| ಮದುವೆಗೆ ವಿಳಂಬ: ಮನನೊಂದು ಯುವಕ ಆತ್ಮಹತ್ಯೆ

ಹುಬ್ಬಳ್ಳಿ: ಕುಟುಂಬಸ್ಥರು ಮದುವೆ ಮಾಡಲು ವಿಳಂಬ ಮಾಡಿದ್ದಕ್ಕೆ ಮನನೊಂದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ಹುಬ್ಬಳ್ಳಿಯ ದೇವಾಂಗಪೇಟೆ ನಿವಾಸಿ ಶರಣಪ್ಪ ಫಕ್ಕೀರಪ್ಪ ಹಡಪದ(೨೯) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆ ಮಾಡಿಕೊಂಡ ಯುವಕನಿಗೆ ಮದುವೆ ನಿಶ್ಚಯವಾಗಿತ್ತು. ಮನೆಯವರೆಲ್ಲ ಲಾಕ್‌ಡೌನ್ ಮುಗಿದ ನಂತರ ಅದ್ಧೂರಿಯಾಗಿ ಮದುವೆ ಮಾಡಲು ನಿರ್ಧರಿಸಿದ್ದರು. ಆದರೆ, ಶರಣಪ್ಪ ಮದುವೆ ಮಾಡಿ ಎಂದು ಕುಟುಂಬದ ಸದಸ್ಯರೊಂದಿಗೆ ಜಗಳ ಮಾಡಿಕೊಂಡು ಶನಿವಾರ ಸಂಜೆ ವೇಳೆ ಮನೆ ಬಿಟ್ಟು ಹೋಗಿ ಸಂತೋಷನಗರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಭಾನುವಾರ ಬೆಳಗ್ಗೆ ಕೆರೆಯಲ್ಲಿ ಸಂತೋಷನ ಮೃತದೇಹ ಪತ್ತೆಯಾಗಿದೆ. ವಿಷಯ ತಿಳಿದು ಅಶೋಕ ನಗರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!