Saturday, July 2, 2022

Latest Posts

ಹೂವು ಬೆಳೆಗಾರರಿಗೆ ಪರಿಹಾರ : ಅರ್ಜಿ ಸಲ್ಲಿಸಲು ಮೇ 26 ಕೊನೆ ದಿನ

ಮಡಿಕೇರಿ: ಕೋವಿಡ್-19ರ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನಿಂದಾಗಿ ಹೂ ಬೆಳೆಗಾರರು ಸಂಕ?ಕ್ಕೆ ತುತ್ತಾಗಿರುವುದರಿಂದ ಹೂವು ಬೆಳೆಗಾರರಿಗೆ ಪರಿಹಾರ ನೀಡಲು ಸರಕಾರ ನಿರ್ಧರಿಸಿದೆ. ಅದರಂತೆ ವಿವಿಧ ರೀತಿಯ ಹೂವು ಬೆಳೆದಿರುವ ಬೆಳೆಗಾರರು ಮೇ 26ರೊಳಗೆ ತಮ್ಮ ವ್ಯಾಪ್ತಿಯ ನಾಡ ಕಚೇರಿ ಅಥವಾ ತಾಲೂಕು ತೋಟಗಾರಿಕಾ ಇಲಾಖೆ ಕಚೇರಿಗೆ ಹೂವು ಬೆಳೆ ಪರಿಹಾರ ಸಂಬಂಧ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಹೂವು ಬೆಳೆಗಾರರಿಗೆ ಪರಿಹಾರ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಹೂ ಬೆಳೆಗಾರರಿಗೆ ಒಂದು ಎಕರೆಗೆ 10ಸಾವಿರ ರೂ. ಹಾಗೂ ಒಂದು ಹೆಕ್ಟೇರ್‌ಗೆ 25ಸಾವಿರ ರೂ. ಸಹಾಯಧನವನ್ನು ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈಗಾಗಲೇ ಹೂವು ಬೆಳೆ ಸಮೀಕ್ಷೆಯಾಗಿದ್ದಲ್ಲಿ ಅದನ್ನು ಪರಿಗಣಿಸುವುದು. ಸಮೀಕ್ಷೆಯಾಗದಿದ್ದಲ್ಲಿ ಸಮೀಕ್ಷೆ ನಡೆಸಿ ಅರ್ಹ ಕೃಷಿಕರಿಗೆ ಪರಿಹಾರ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಧರ್ ಅವರು ಮಾಹಿತಿ ನೀಡಿ, ಅಲ್ಪಾವಧಿ ಬೆಳೆಗಳಾದ ಚೆಂಡು ಹೂವು, ಸೇವಂತಿಗೆ, ಆಸ್ಟರ್, ಬಹುವಾರ್ಷಿಕ ಬೆಳೆಗಳಾದ ಕನಕಾಂಬರ, ಗುಲಾಬಿ, ಮಲ್ಲಿಗೆ, ಕಾಕಡ, ಬರ್ಡ್ ಆಫ್ ಪ್ಯಾರಡೈಸ್. ಸಂರಕ್ಷಿತ ಬೇಸಾಯದಲ್ಲಿ ಬೆಳೆಯುವ ಬೆಳೆಗಳಾದ ಗುಲಾಬಿ, ಜರ್ಬೆರಾ, ಕಾರ್ನೇ?ನ್, ಆರ್ಕಿಡ್, ಆಂಥೋರಿಯಂ ಮತ್ತಿತರ ಪು? ಬೆಳೆಗಳಿಗೆ ಪರಿಹಾರ ದೊರೆಯಲಿದೆ. ಪ್ರತಿ ಫಲಾನುಭವಿಗಳಿಗೆ ಗರಿಷ್ಠ 1 ಹೆಕ್ಟೇರ್ ಪ್ರದೇಶಕ್ಕೆ 25 ಸಾವಿರ ರೂ ಮೀರದಂತೆ ಅಥವಾ ಹೂ ಬೆಳೆಯ ವಿಸ್ತೀರ್ಣಕ್ಕೆ ಅನುಗುಣವಾಗಿ ಸಹಾಯಧನ ದೊರೆಯಲಿದೆ ಎಂದು ವಿವರಿಸಿದರು.
ಫಲಾನುಭವಿಗಳ ಆಯ್ಕೆ ಮತ್ತು ಅರ್ಹತೆ 
2019-20 ನೇ ಸಾಲಿನ ಹೂವು ಬೆಳೆಗಳಿಗೆ ಹಿಂಗಾರು ಬೆಳೆ ಸಮೀಕ್ಷೆಯನ್ನು ಆಧಾರವಾಗಿಸಿಕೊಳ್ಳುವುದು ಮತ್ತು ಬಹುವಾರ್ಷಿಕ ಬೆಳೆಗಳಿಗೆ 2019-20 ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆಯನ್ನು ಆಧಾರವಾಗಿರಿಸಿಕೊಳ್ಳುವುದು.
ಮಾರ್ಚ್ 24ರ ನಂತರ ನಾಟಿ ಮಾಡಿದ ಬೆಳೆಗಳನ್ನು ಪರಿಗಣಿಸುವುದಿಲ್ಲ, ಬೆಳೆ ಸಮೀಕ್ಷೆಯಲ್ಲಿ ನಮೂದಾಗದೇ ಇರುವ ಹೂವು ಬೆಳೆಗಾರರಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಪಡೆಯುವುದು ಹಾಗೂ ಈಗಾಗಲೇ ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ರೈತರಿಂದ ಯಾವುದೇ ದಾಖಲಾತಿಗಳನ್ನು ಪಡೆಯುವಂತೆ ಇಲ್ಲ, ಫಲಾನುಭವಿಯು ಹೂವು ಬೆಳೆಗಾರರಾಗಿದ್ದು, ಕಡ್ಡಾಯವಾಗಿ ಆರ್‌ಟಿಸಿ ಅವರ ಹೆಸರಿನಲ್ಲಿ ಇರಬೇಕು. ಜಂಟಿ ಖಾತೆಯಿದ್ದಲ್ಲಿ ಒಪ್ಪಿಗೆ ಪತ್ರ ಪಡೆಯಬೇಕು, ಆರ್‌ಟಿಸಿದಾರರು ಮರಣ ಹೊಂದಿದ್ದಲ್ಲಿ ಅವರ ಕುಟುಂಬದವರಿಂದ ಅಗತ್ಯ ದಾಖಲಾತಿಗಳನ್ನು ಪಡೆದು ಸಹಾಯಧನ ವಿತರಿಸಲಾಗುತ್ತದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಶಿಧರ್ ಅವರು ಮಾಹಿತಿ ನೀಡಿದರು.
ಅರ್ಜಿಯೊಂದಿಗೆ ಆರ್‌ಟಿಸಿಯ ಮೂಲ ಪ್ರತಿ, ಸ್ವಯಂ ಘೋಷಿತ ಪ್ರಮಾಣ ಪತ್ರ, ಬ್ಯಾಂಕ್ ಖಾತೆಯ ವಿವರಣೆ ನೀಡಬೇಕು. ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಶಿಧರ್ (9448999227), ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್- 9448336863 (ಮಡಿಕೇರಿ), ಶರತ್-8553933357 (ಸೋಮವಾರಪೇಟೆ), ಡೀನಾ-9448049020 (ವೀರಾಜಪೇಟೆ) ಇವರನ್ನು ಸಂಪರ್ಕಿಸಬಹುದಾಗಿದೆ.
ತಹಶೀಲ್ದಾರರಾದ ಮಹೇಶ್, ಗೋವಿಂದ ರಾಜು, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ಪ್ರಮೋದ್, ಡೀನಾ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ್ ಪಾಟೀಲ್ ಇತರರು ಸಭೆಯಲ್ಲಿ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss