Thursday, August 18, 2022

Latest Posts

ಹೃದಯಾಘಾತದಿಂದ ಲಿಂಗೈಕ್ಯರಾದ ಬೆಳಗಾವಿ ಅಭಿನವ ಶಿವಪುತ್ರ ಮಹಾಸ್ವಾಮಿಗಳು

ಬೆಳಗಾವಿ: ಅಭಿನವ ಶಿವಪುತ್ರ ಮಹಾಸ್ವಾಮಿಗಳು, ಷಣ್ಮುಖಾರೂಢ ಮಠ ವಿಜಯಪುರ ಹಾಗೂ ಶಾಂತಾಶ್ರಮ, ಹುಬ್ಬಳ್ಳಿ (೬೪) ಇವರು ಹೃದಯಾಘಾತದಿಂದ ಶುಕ್ರವಾರ ರಾತ್ರಿ ೮.೩೦ ಗಂಟೆಗೆ ಲಿಂಗೈಕ್ಯರಾಗಿದ್ದಾರೆ.
ನಗರದ ಕೆ‌ಎಲ್ಇ ಆಸ್ಪತ್ರೆಗೆ ಇಂದು ಸಂಜೆ ದಾಖಲಾಗಿದ್ದ ಶ್ರೀಗಳು ಚಿಕಿತ್ಸೆ ಫಲಿಸದೇ ಲಿಂಗೈಕ್ಯರಾದರು.
ಕಳೆದ ಎರಡು ದಿನಗಳಿಂದ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಹೆಚ್ಚಿನ ಚಿಕಿತ್ಸೆಗೆ ಶುಕ್ರವಾರ ಸಂಜೆ ಕೆ.ಎಲ್.ಇ ಆಸ್ಪತ್ರೆಗೆ ಕರೆತರಲಾಗಿದ್ದು, ಫಲಕಾರಿಯಾಗದೇ ಲಿಂಗೈಕ್ಯರಾದರು ಎಂದು ಶ್ರೀಮಠದ ಉತ್ತರಾಧಿಕಾರಿಗಳಾದ ಅಭಿನವ ಸಿದ್ಧಾರೂಢ ಸ್ವಾಮೀಜಿಯವರು ತಿಳಿಸಿದ್ದಾರೆ.
ನಾಳೆ ಹುಬ್ಬಳ್ಳಿಯಲ್ಲಿ ಅಂತ್ಯಕ್ರಿಯೆ:
ಅಭಿನವ ಶಿವಪುತ್ರ ಮಹಾಸ್ವಾಮಿಗಳ ಸಮಾಧಿಕ್ರಿಯೆ ಶನಿವಾರ(ಆ.೮) ಮಧ್ಯಾಹ್ನ ೩ ಗಂಟೆಗೆ ಹುಬ್ಬಳ್ಳಿಯ ಸಿದ್ಧಾರೂಢ ಮಠದ ಬಳಿಯ ಶಾಂತಾಶ್ರಮದ ಆವರಣದಲ್ಲಿ ಪೂಜ್ಯರ ಸಮಾಧಿಕ್ರಿಯೆ ನೆರೆವೇರಲಿದೆ. ಶ್ರೀಗಳ ನಿಧನಕ್ಕೆ ಶಿವಾನಂದ ಭಾರತಿ ಸ್ವಾಮಿಗಳು ಸಾಧು ಸಂಸ್ಥಾನಮಠ ಇಂಚಲ, ಶಿವಕುಮಾರ ಸ್ವಾಮಿಗಳು ಬೀದರ್, ಗದುಗಿನ ಡಂಬಳ ಜಗದ್ಗುರು ತೋಂಟದ ಸಿದ್ಧರಾಮ ಸ್ವಾಮೀಜಿ,
ನಾಗನೂರು ರುದ್ರಾಕ್ಷಿ ಮಠದ ಅಲ್ಲಮಪ್ರಭು ಸ್ವಾಮೀಜಿ ಹಾಗೂ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಮತ್ತಿತರರ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!