ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಹೆಚ್. ವಿಶ್ವನಾಥ್ ಅವರಿಗೆ ನಮ್ಮ ಪಕ್ಷದ ಸಿದ್ಧಾಂತ ಗೊತ್ತಿಲ್ಲ: ಶಾಸಕ ಎಲ್.ನಾಗೇಂದ್ರ ತಿರುಗೇಟು

ಹೊಸದಿಗಂತ ವರದಿ,ಮೈಸೂರು:

ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರಿಗೆ ನಮ್ಮ ಪಕ್ಷದ ಸಿದ್ಧಾಂತ ಗೊತ್ತಿಲ್ಲ. ಪಕ್ಷದಲ್ಲಿ ಎಲ್ಲದ್ದಕ್ಕೂ ಶಿಸ್ತು ಎನ್ನುವುದಿದೆ ಎಂದು ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ಎಲ್.ನಾಗೇಂದ್ರ ತಿರುಗೇಟು ನೀಡಿದರು.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಸಿಗದ್ದಕ್ಕೆ ಹೆಚ್.ವಿಶ್ವನಾಥ್ ಬಹಿರಂಗ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅವರು ಹಿರಿಯರಿದ್ದಾರೆ, ಅವರಿಗೆ ಏನೂ ಹೇಳುವ ಅವಶ್ಯಕತೆ ಇಲ್ಲ. ಅವರಿಗೆ ಕೇವಲ ಸಲಹೆ ಮಾತ್ರವೇ ನೀಡಬಹುದು. ಅವರು ಬೇರೆ ಬೇರೆ ಪಕ್ಷಗಳಿಗೆ ಹೋಗಿ ಬಂದಿದ್ದಾರೆ. ಎಲ್ಲವನ್ನೂ ರಾಜ್ಯದ ಜನತೆಗೆ ಹೇಳುವ ಅವಶ್ಯಕತೆ ಇಲ್ಲ. ಪಕ್ಷದ ಚೌಕಟ್ಟಿನಲ್ಲಿ, ನಾಲ್ಕು ಗೋಡೆಗಳ ಮಧ್ಯದಲ್ಲಿ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು. ವಿಶ್ವನಾಥ್ ಅವರು ಸಹನೆಯಿಂದ ಇರಬೇಕು ಎಂದು ಸಲಹೆ ನೀಡಿದರು.

ಮೈಸೂರು ಭಾಗಕ್ಕೆ ಸಚಿವ ಸ್ಥಾನದಲ್ಲಿ ಪ್ರಾತಿನಿಧ್ಯ ನೀಡದೇ ಇರುವುದರ ಕುರಿತು ಪ್ರತಿಕ್ರಿಯಿಸಿದ ಶಾಸಕ ನಾಗೇಂದ್ರ, ಮೈಸೂರು ಭಾಗಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ, ನಿಜ. ನಾನು ಇದ್ದೇನೆ, ರಾಮದಾಸ್ ಅವರೂ ಇದ್ದಾರೆ. ನಾವೂ ಬಹಳ ವರ್ಷಗಳಿಂದ ಪಕ್ಷದಲ್ಲಿ ಇದ್ದೇವೆ, ನಮಗೂ ಅವಕಾಶ ಸಿಕ್ಕಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಹೇಳಿದ್ದಾರೆ. ಯಾರಿಗೆಲ್ಲಾ ಸಮಸ್ಯೆ ಆಗಿದೆಯೋ ಅವರೆಲ್ಲಾ ರಾಷ್ಟಿçÃಯ ಅಧ್ಯಕ್ಷರನ್ನೊ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಅಂತ. ಪಕ್ಷದ ಚೌಕಟ್ಟಿನಲ್ಲಿ ಯಾರು ಬೇಕಾದರೂ ಭೇಟಿ ಮಾಡಬಹುದು. ಎಲ್ಲರಿಗೂ ಅವಕಾಶವಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss