ಚೆನ್ನೈ: ಹೆಸರಾಂತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಕೊರೊನಾ ಸೋಂಕಿನಿಂದ ಬಳಲುತ್ತಿರುವ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತೀವ್ರ ನಿಗಾ ಘಟಕದಲ್ಲಿ ಅವರನ್ನು ಚಿಕಿತ್ಸೆಗೊಳಪಡಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಆ.13ರ ರಾತ್ರಿ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಎಸ್ಪಿಬಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈನಡುವೆ ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ಸ್ವತಃ ಎಸ್ಪಿಬಿ ಅವರು ಕಳೆದ ವಾರ ತಮ್ಮ ಫೇಸ್ಬುಕ್ನಲ್ಲಿ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದರು.