Saturday, July 2, 2022

Latest Posts

ಹೈಕಮಾಂಡ್ ನೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆಗೆ ಅವಕಾಶ: ಬಸವರಾಜ ಬೊಮ್ಮಾಯಿ

ಹೊಸ ದಿಗಂತ ವರದಿ, ಹಾವೇರಿ:

ಸಚಿವ ಸಂಪುಟ ವಿಸ್ತರಣೆಗೂ ಗ್ರಾ.ಪಂ ಚುನಾವಣಾ ನೀತಿ ಸಂಹಿತೆಗೂ ಯಾವುದೇ ಸಂಬಂಧವಿಲ್ಲ. ಮುಖ್ಯಮಂತ್ರಿಗಳು ಹೈಕಮಾಂಡ್‌ನೊಂದಿಗೆ ಚರ್ಚಿಸಿ ಸಚಿವ ಸಂಪುಟವನ್ನು ಯಾವುದೇ ಸಮಯದಲ್ಲಿ ವಿಸ್ತರಿಸಬಹುದಾಗಿದೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲೆಯ ಹಿರೇಕೆರೂರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಮೂಲ ಹಾಗೂ ವಲಸಿಗರು ಎನ್ನುವುದಿಲ್ಲ. ಯಾರಾದರೂ ನಾಲ್ಕಾರು ಜನರು ಕೂಡಿ ಊಟ ಮಾಡಿದರೆ ಅದನ್ನು ನಾನು ಸಭೆ ಎಂದು ಪರಿಗಣಿಸುವುದಿಲ್ಲ, ಗ್ರಾಮ ಪಂಚಾಯತ್ ಚುನಾವಣೆಗಳನ್ನು ಮಾಡುವುದಕ್ಕೆ ಬಾರತೀಯ ಜನತಾ ಪಕ್ಷ ಸ್ನನದ್ಧವಾಗಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯತಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡಬೇಕೆಂಬ ಉದ್ದೇಶದಿಂದ ಬಿಜೆಪಿಯ ಮುಖಂಡರು ಆರು ತಂಡಗಳಾಗಿ ರಾಜ್ಯಾದ್ಯಂತ ಗ್ರಾಮ ಸ್ವರಾಜ್ಯ ಸಮಾವೇಶಗಳನ್ನು ಮಾಡುವ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹವನ್ನು ತುಂಬುತ್ತಿದ್ದಾರೆ. ಡಿ.೫ ರಂದು ಬೆಳಗಾವಿಯಲ್ಲಿ ರಾಜ್ಯಮಟ್ಟದ ಸಭೆ ಜರುಗಲಿದೆ. ಪ್ರಸಕ್ತ ಗ್ರಾ.ಪಂ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಲ್ಲಿ ಪಕ್ಷದ ಕಾರ್ಯಕರ್ತರು ಆಯ್ಕೆ ಆಗುತ್ತಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸಿ.ಡಿ ಕುರಿತಾದ ಹೇಳಿಕೆ ಕುರಿತು ನಾವು ಇಗಾಗಲೇ ಹೇಳಿದ್ದೇವೆ. ಡಿಕೆಶಿ ಅವರು ಸಹ ಸ್ಪಷ್ಟೀಕರಣವನ್ನು ನೀಡಿದ್ದಾರೆ ಈ ಕುರಿತು ಹೆಚ್ಚಿಗೆ ಹೇಳುವ ಅವಶ್ಯಕತೆ ಇಲ್ಲ ಎಂದುಕೊಂಡಿದ್ದೇನೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss