Thursday, July 7, 2022

Latest Posts

ಹೈಬ್ರೀಡ್ ಕೊರೋನಾ ಭೀತಿ: ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯಗಳಿಗೆ ಕೇಂದ್ರದಿಂದ ಖಡಕ್ ಎಚ್ಚರಿಕೆ!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಭಾರತದಲ್ಲಿ ಬ್ರಿಟನ್ ರೂಪಾಂತರಿ ಕೊರೋನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ರಾಜ್ಯದಲ್ಲಿಯೂ 7 ಮಂದಿಗೆ  ಬ್ರಿಟನ್ ಸೋಂಕು ದೃಢಪಟ್ಟಿರುವುದರಿಂದ ಒಟ್ಟಾರೆ ದೇಶದಲ್ಲಿ ರೂಪಾಂತರಿ ಕೊರೋನಾ ಪ್ರಕರಣ 20ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು,  ಬ್ರಿಟನ್‍ನಿಂದ ಬಂದ 107 ವಿದೇಶಿಗರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 20 ಮಂದಿಗೆ ರೂಪಾಂತರ ಕೊರೊನಾ ಕಾಣಿಸಿಕೊಂಡಿದೆ. ದೆಹಲಿ 8, ಕೋಲ್ಕತ್ತಾ 1, ಪುಣೆ 1, ಕರ್ನಾಟಕ7, ಉತ್ತರಪ್ರದೇಶ 1 ಸೇರಿದಂತೆ ಒಟ್ಟೂ ದೇಶದಲ್ಲಿ ರೂಪಾಂತರಿ ಕೊರೋನಾ ಸೋಂಕು ಪ್ರಕರಣ 20ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ನಿರ್ಲಕ್ಷ ಮಾಡದೆ ತಕ್ಷಣವೇ ಎಲ್ಲ ರಾಜ್ಯ ಸರ್ಕಾರಗಳು ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss