ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಜ್ಯದಲ್ಲಿ ಹೈಬ್ರೀಡ್ ಕೊರೋನಾ ಹೆಚ್ಚುತ್ತಿದ್ದು, ನೂತನ ವರ್ಷದಿಂದ ಶಾಲೆ ಆರಂಭ ಡೌಟ್ ಎನ್ನಲಾಗಿದೆ.
ಹೊಸ ಸ್ವರೂಪದ ಹೈಬ್ರೀಡ್ ಕೊರೋನಾ ರಾಜ್ಯದಲ್ಲಿ ಆತಂಕ ಸೃಷ್ಟಿಸಿದ್ದು, ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದೇಟು ಹಾಕುತ್ತಿದ್ದಾರೆ.
ಸರ್ಕಾರಕ್ಕೆ ಹೊಸ ಟೆನ್ಶನ್ ಆರಂಭವಾಗಿದೆ. ಕೊರೋನಾದಿಂದಾಗಿ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಶಾಲೆ ಆರಂಭಿಸುವುದಾಗಿ ಸರ್ಕಾರ ಹೇಳಿತ್ತು.ಆದರೆ ಹೈಬ್ರೀಡ್ ಕೊರೋನಾದಿಂದಾಗಿ ಮತ್ತೆ ಶಾಲೆಗಳು ಓಪನ್ ಆಗುವುದು ಡೌಟ್ ಆಗಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಜನವರಿ ಫುಲ್ ಲಾಕ್ಡೌನ್ ಜಾರಿ ಮಾಡಲಾಗಿದ್ದು, ರಾಜ್ಯದಲ್ಲೂ ಶಾಲೆಗಳ ಆರಂಭದ ಬಗ್ಗೆ ಚಿಂತನೆ ಮಾಡಬೇಕಿದೆ.
ಸೋಂಕಿನ ಪ್ರಕರಣಗಳು ಪತ್ತೆಯಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಮಾಡಬೇಕಾ ಬೇಡವಾ ಎನ್ನುವ ಬಗ್ಗೆ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಎಲ್ಲಾ ಸಚಿವರು, ಶಾಸಕರ ಅಭಿಪ್ರಾಯ ಕೋರಿದ್ದಾರೆ. ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಬಗ್ಗೆ ಇನ್ನೂ ಗೊಂದಲವಿದೆ. ಪೋಷಕರು ಮಕ್ಕಳನ್ನು ಕಳಿಸೋಕೆ ಹಿಂದೇಟು ಹಾಕಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಅಂತಿಮವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಸಚಿವ ಆರ್.ಅಶೋಕ್ ಹೇಳಿದ್ದಾರೆ.