Saturday, August 13, 2022

Latest Posts

ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದ ಸಿಎಂ

ಬೆಳಗಾವಿ : ಕೋವಿಡ್-19 ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ನಾಲ್ಕು ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು.
ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲರು ಕೊಡಮಾಡಿದ ಈ ಉಪಕರಣಗಳನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯ ಬಳಿಕ ಈ ಉಪಕರಣಗಳನ್ನು ಮುಖ್ಯಮಂತ್ರಿಗಳು ಆಸ್ಪತ್ರೆಗೆ ನೀಡಿದರು.
ರಾಜ್ಯದಲ್ಲಿ ಮೊದಲ ಬಾರಿ ಶಾಸಕ ಪಾಟೀಲ ಅವರು ನೀಡಿದ್ದಾರೆ. ಇದೇ ರೀತಿ ಉಳಿದ ಕ್ಷೇತ್ರದ ಶಾಸಕರೂ ಈ ರೀತಿಯ ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಲಹೆ ನೀಡಿದರು.
ಇದಕ್ಕೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಸುತ್ತೋಲೆ ಕೂಡ ಹೊರಡಿಸಲಾಗುತ್ತದೆ ಎಂದರು.
ತಮ್ಮ ಅನುದಾನದಲ್ಲಿ ಬಿಮ್ಸ್ ಗೆ ಆಕ್ಸಿಜನ್ ಉಪಕರಣ ಕೊಡುಗೆ ನೀಡಿದ ಶಾಸಕ ಅಭಯ ಪಾಟೀಲ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.
ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಜಗದೀಶ ಶೆಟ್ಟರ, ಬಸವರಾಜ ಬೊಮ್ಮಾಯಿ, ರಮೇಶ ಜಾರಕಿಹೊಳಿ, ಆರ್.ಅಶೋಕ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ ಸೇರಿದಂತೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss