Saturday, July 2, 2022

Latest Posts

ಹೊರರೋಗಿಗಳ ವಿಭಾಗ ಇಟಿಸಿಎಂ ಆಸ್ಪತ್ರೆಗೆ ಶಿಫ್ಟ್-ಡಿಸಿ ಸಿ. ಸತ್ಯಭಾಮ

ಕೋಲಾರ: ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಿರುವುದರಿಮದ ಎಸ್‌ಆರ್‌ಆರ್ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸುವ ಸಾಧ್ಯತೆ ಹಿನ್ನಲೆಯಲ್ಲಿ ಇಲ್ಲಿನ ಹೊರ ರೋಗಿಗಳ ವಿಭಾಗವನ್ನು ಜು.೨೨ ರಿಂದ ಇಟಿಸಿಎಂ ಆಸ್ಪತ್ರೆಗೆ ಸ್ಥಳಂತರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ತಿಳಿಸಿದರು.
ಈ ಸಂಬಂಧ ಇಟಿಸಿಎಂ ಆಸ್ಪತ್ರೆಗೆ ಭೇಟಿ ನೀಡಿ ಕಟ್ಟಡದ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.
ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ, ಈಗಾಗಲೇ ೪೦೦ ಗಡಿ ದಾಟಿದ್ದು, ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆಗಳ ಸಮಸ್ಯೆ ಎದುರಾಗಲಿದೆ ಎಂದು ತಿಳಿಸಿದರು.
ಈ ಹಿನ್ನಲೆಯಲ್ಲಿ ಜಿಲ್ಲಾಸ್ಪತ್ರೆಯನ್ನು ಪೂರ್ಣ ಕೋವಿಡ್ ಆಸ್ಪತ್ರೆಯಾಗಿಯೇ ಬದಲಿಸಲು ನಿರ್ಧರಿಸಲಾಗಿದೆ, ಆದ್ದರಿಂದಾಗಿ ಹೊರರೋಗಿಗಳಿಗೆ ಚಿಕಿತ್ಸೆ ಮುಂದುವರೆಸಬೇಕಾದ್ದರಿಂದ ಈ ವಿಭಾಗವನ್ನು ಇಟಿಸಿಎಂ ಆಸ್ಪತ್ರೆಗೆ ಸ್ಥಳಂತರಿಸಲು ತೀರ್ಮಾನಿಸಲಾಗಿದೆ ಎಂದರು.
ಈ ಮೂಲಕ ಜಿಲ್ಲಾಸ್ಪತ್ರೆಗೆ ಬರುವ ಹೊರರೋಗಿಗಳಿಗೆ ಜುಲೈ ೨೨ ರ ಬುಧವಾರದಿಂದ, ಎಸ್.ಎನ್.ಆರ್ ಜಿಲ್ಲಾಸ್ಪತ್ರೆಗೆ ಹೊಂದಿಕೊಂಡಿರುವ ಇಟಿಸಿಎಂ ಕಟ್ಟಡದಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.
ಇದುವರೆಗೂ ಕೋವಿಡ್ ಸೋಂಕಿತರಿಗಾಗಿ ಸುಮಾರು ೨೦೦ ಹಾಸಿಗೆಗಳನ್ನ ಜಿಲ್ಲಾಸ್ಪತ್ರೆಯಲ್ಲಿ ನಿಗಧಿಪಡಿಸಲಾಗಿತ್ತು. ಇದೀಗ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆ, ಹಾಸಿಗೆಗಳ ಸಾಮರ್ಥ್ಯ ಹೆಚ್ಚಳ ಮಾಡುವ ಉದ್ದೇಶದಿಂದ ಜಿಲ್ಲಾಸ್ಪತ್ರೆಯನ್ನ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲಾಗುತ್ತಿದೆ.
ಈ ಮೂಲಕ ೪೫೦ ಹಾಸಿಗೆಗಳಿಗೆ ಹೆಚ್ಚಳ ಮಾಡಿದ್ದು, ಇದುವರೆಗೂ ೧೩೮ ಕೊರೊನಾ ಸೋಂಕಿತರು ಜಿಲ್ಲಾಸ್ಪತ್ರೆಯಲ್ಲಿದ್ದಾರೆ, ಇವರಲ್ಲಿ ಇಂದು ಸುಮಾರು ೫೨ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಜಿ.ನಾರಾಯಣಸ್ವಾಮಿ, ಡಿಹೆಚ್‌ಒ ವಿಜಯಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಣಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ರಮ್ಯದೀಪಿಲಾ ಮತ್ತಿತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss