Thursday, August 18, 2022

Latest Posts

ಹೊರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕ್ರಮ: ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಹೊರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ.
ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಪುನಃ ಬಸ್ ಸಂಚಾರ ಪ್ರಾರಂಭಿಸಲಾಗುವುದು ಎಂದು ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ರಾಜ್ಯದಿಂದ ಆಂಧ್ರ ಪ್ರದೇಶಕ್ಕೆ ಸರ್ಕಾರಿ ಸಾರಿಗೆ ಬಸ್ ಸಂಚಾರ ಪ್ರಾರಂಭಿಸಲಾಗಿದೆ. ಸಾರ್ವಜನಿಕರ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಬಸ್ ಸಂಚಾರ ಪ್ರಾರಂಭಿಸುವ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೋರಿ  ಸಾರಿಗೆ ಇಲಾಖೆಯಿಂದ ಪತ್ರ ಬರೆಯಲಾಗಿದೆ ಎಂದಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳು ಬಸ್ ಸಂಚಾರಕ್ಕೆ ಸಜ್ಜಾಗಿವೆ. ಆದರೆ ಪಕ್ಕದ ಈ ಎಲ್ಲಾ ರಾಜ್ಯಗಳಿಂದ ಇದಕ್ಕೆ ಹಸಿರು ನಿಶಾನೆ ದೊರೆಯಬೇಕಿದೆ. ಬಳಿಕ ಬಸ್ ಸಂಚಾರ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!