ಹೊಸಪೇಟೆ ಕಂಟೈನ್ಮೆಂಟ್ ಝೋನ್: ವಾಹನ ಸಂಚಾರ, ಜನರ ಓಡಾಟ ಸಂಪೂರ್ಣ ಬಂದ್

0
57

ಬಳ್ಳಾರಿ: ಯಾವುದೇ ಸ್ಥಳದಲ್ಲಿ ಪಾಸಿಟಿವ್ ಕೇಸ್ ಬಂದಾಗ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ಗೈಡ್ ಲೈನ್ಸ್ ಅನುಸಾರ ಮಾಡಬೇಕಾಗುತ್ತದೆ. ಹೊಸಪೇಟೆ ನಗರಸಭೆ ವ್ಯಾಪ್ತಿಯನ್ನು ಕಂಟೈನ್ಮೆಂಟ್ ಝೋನ್ ಆಗಿ ಕೈಗೆತ್ತಿಕೊಳ್ಳಲಾಗುವುದು. ಇಂದಿನಿಂದ ಯಾವುದೇ ರೀತಿಯ ವಾಹನ ಸಂಚಾರ ಆಗಲಿ ಅಥವಾ ಜನರ ಓಡಾಟವಾಗಲಿ ಅಥವಾ ಹೊರಗಡೆಯಿಂದ ಒಳಗಡೆ ಬರುವುದಕ್ಕೆ ಅವಕಾಶವಿರುವುದಿಲ್ಲ ಎಂದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸ್ಪಷ್ಟಪಡಿಸಿದ್ದಾರೆ.
ಮಾ.31ರಿಂದ ಬೆಳಗ್ಗೆ 9ರಿಂದ 10ರವರೆಗೆ ಮಾತ್ರ ಜನರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದ್ದು, ಎಲ್ಲ ರಸ್ತೆಗಳಲ್ಲಿ ಪಹಬಂಧಿ ಹಾಕಲಾಗಿರುವುದರಿಂದ ಮನೆಗೊಬ್ಬರು ಮಾತ್ರ ಹೊರಬಂದು ತಮ್ಮ ಏರಿಯಾದಲ್ಲಿನ ಅಂಗಡಿಗಳಲ್ಲಿಯೇ ಖರೀದಿ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.
ಮನೆ-ಮನೆ ಸಮೀಕ್ಷೆ ನಾಳೆಯಿಂದ ನಾಳೆಯಿಂದಲೇ (ಮಾ.31) ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಯಾರಿಗಾದರೂ ಕೆಮ್ಮು,ನಗಡಿ, ಜ್ವರ ಇತ್ಯಾದಿ ಲಕ್ಷಣಗಳಿದ್ದಲ್ಲಿ ಸಮೀಕ್ಷೆ ಮಾಡಲಾಗುತ್ತಿದ್ದು, ಜನರು ಇಂತಹ ಸಂದರ್ಭದಲ್ಲಿ ಸಹಕರಿಸಬೇಕು ಎಂದು ಡಿಸಿ ನಕುಲ್ ಅವರು ಮನವಿ ಮಾಡಿದ್ದಾರೆ.
ಯಾರಿಗಾದರೂ ಕೆಮ್ಮು,ನೆಗಡಿ,ಜ್ವರದ ಲಕ್ಷಣಗಳು ಇದ್ದಲ್ಲಿ ಅವರಿಗಾಗಿಯೇ ಕ್ಲಿನಿಕ್ ಆರಂಭಿಸಲಾಗಿದ್ದು, ಆಕಾಶವಾಣಿ ಹತ್ತಿರ, ಟಿಬಿ ಡ್ಯಾಂ ಹೆಲ್ತ್ ಸೆಂಟರ್, ಹೊಸ ಎಂಸಿಎಚ್ ಆಸ್ಪತ್ರೆಯಲ್ಲಿ ವಿಶೇಷ ತಪಾಸಣೆ ನಡೆಯುತ್ತಿದ್ದು, ಲಕ್ಷಣಗಳು ಇದ್ದವರು ಬಂದು ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅವರು ಕೋರಿಕೊಂಡಿದ್ದಾರೆ. ಇಂತಹ ತುರ್ತು ಸಂದರ್ಭದಲ್ಲಿ ಹೊಸಪೇಟೆಯ ನಗರದ ಜನರು ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here