Wednesday, August 10, 2022

Latest Posts

ಹೊಸಪೇಟೆ ನಗರದ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನಕ್ಕೆ ಬೇಡಿಕೆ: ಸಚಿವ ಆನಂದ್​ ಸಿಂಗ್

ಹೊಸ ದಿಗಂತ ವರದಿ, ಹೊಸಪೇಟೆ:

ಬರುವ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆ ನಡೆಲಿದ್ದು, ಹೊಸಪೇಟೆಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಲು 500 ಕೋಟಿ ರೂ. ಅನುದಾನದ ಬೇಡಿಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಹೇಳಿದರು.
ನಗರದ ಪಟೇಲ್​ ನಗರ ಬಿಜೆಪಿ ಕಚೇರಿಯಲ್ಲಿ ಗ್ರಾ.ಪಂ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಬೆಂಬಲಿತ ಸದಸ್ಯರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಜಿಲ್ಲಾ ಕಚೇರಿ, ಜಿಲ್ಲಾ ವರಿಷ್ಠಾಧಿಕಾರಿ ಕಚೇರಿ ಹಾಗೂ ಜಿ.ಪಂ. ಕಚೇರಿ ಸೇರಿದಂತೆ ಅಭಿವೃದ್ಧಿ ಕೆಲಸಗಳಿಗೆ ಅನುದಾನದ ಬೇಡಿಕೆಯನ್ನು ಇಡಲಾಗಿದೆ ಎಂದರು.
ಗ್ರಾಮ ಪಂಚಾಯತ್​ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಬಂಬಲಿತ ಅಭ್ಯರ್ಥಿಗಳು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಕಾರ್ಯಕರ್ತರಿಗೆ ಹುರಿದುಂಬಿಸಿದರು. ಇದರ ಜೊತೆಗೆ ಇದು ಭರವಸೆಯಲ್ಲ ನಮ್ಮವರೇ ಅಧ್ಯಕ್ಷರಾಗಲಿದ್ದಾರೆ ಎಂದು ಭರವಸೆ ನೀಡಿದರು. ಎಷ್ಟು ಜನ್ಮ ಎತ್ತಿದರೂ ಬಿಜೆಪಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಋಣ ತೀರಿಸಲು ಸಾಧ್ಯವಿಲ್ಲ. ವಿಜಯನಗರ ಜಿಲ್ಲೆಯನ್ನು ಘೋಷಿಸಿದ ಅವರನ್ನು ಸದಾ ನೆನಪು ಇಟ್ಟುಕೊಳ್ಳಬೇಕು. ಪಶ್ಚಿಮ ತಾಲೂಕು ಜನರು ಪಕ್ಷಾತೀತವಾಗಿ ಅವರನ್ನು ಮರೆಯುವುದಕ್ಕೆ ಆಗುವುದಿಲ್ಲ ಎಂದರು.
ವಿಜಯನಗರ ಜಿಲ್ಲೆ ಪಕ್ಕಾ ಆಗಲಿದೆ, ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು. ಈ ಸಂದರ್ಭದಲ್ಲಿ ಹೂಡಾ ಅಧ್ಯಕ್ಷ ಅಶೋಕ್ ಜೀರೆ, ಮುಖಂಡರಾದ ಸಂದೀಪ್ ಸಿಂಗ್, ಮುನ್ನಾ ಭಾಯಿ ಸೇರಿದಂತೆ ಬಿಜೆಪಿ ನಾಯಕರು, ಕಾರ್ಯಕರ್ತರು, ಮುಖಂಡರು ಇತರರಿದ್ದರು‌. ಇದಕ್ಕೂ ಮುನ್ನ ನೂತನ ಗ್ರಾ.ಪಂ.ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss