Thursday, June 30, 2022

Latest Posts

ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ!

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣದಲ್ಲಿನ ಏರಿಳಿತದಿಂದ ಈ ಬಾರಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಹಾಕಲು ಈಗಾಗಲೇ ಸರಕಾರ ನಿರ್ಧಾರಿಸಿದ್ದು, ಈ ಹಿನ್ನೆಲೆ ಪ್ರತಿ ವರ್ಷದಂತೆ ಎಂ.ಜಿ ರೋಡ್, ಇಂದಿರಾ ನಗರ, ಕೋರಮಂಗಲ ಸೇರಿದಂತೆ ಸಾರ್ವಜನಿಕ ರಸ್ತೆಯಲ್ಲಿ ಯಾವುದೇ ರೀತಿಯ ಸಂಭ್ರಮಾಚರಣೆಗೆ ಅವಕಾಶವಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಬಾರ್, ಪಬ್, ರೆಸ್ಟೋರೆಂಟ್​ಗಳಿಗೆ ಪೊಲೀಸ್ ಇಲಾಖೆಯಿಂದ ಸೂಚನೆ ನೀಡಲಾಗುತ್ತದೆ. ಹೀಗಾಗಿ ಪೊಲೀಸ್ ಇಲಾಖೆಯ ನಿಯಮದ ಪ್ರಕಾರ ಬಾರ್​, ರೆಸ್ಟೋರೆಂಟ್​ಗಳು ಕಾರ್ಯ ನಿರ್ವಹಿಸಬೇಕು. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss