ಉಡುಪಿ: ವಾರದ ಹಿಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಪರ್ಕಕ್ಕೆ ಬಂದಿದ್ದ ಹಿಂದು ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕೋವಿಡ್ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಆ. 2ರಂದು ಕೋವಿಡ್ ಪಾಸಿಟಿವ್ ಬಂದಿತ್ತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜು. 30ರಂದು ಮುಖ್ಯಮಂತ್ರಿ ಅವರೊಂದಿಗೆ ಇಲಾಖಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ಕಾರಣದಿಂದ ಸಚಿವರು ಸೋಮವಾರ ಮತ್ತು ಮಂಗಳವಾರ ಎರಡು ದಿನಗಳ ಕಾಲ ಸ್ವಯಂ ಗೃಹ ದಿಗ್ಭಂದನದಲ್ಲಿದ್ದರು. ಇದೇ ವೇಳೆ ಕೋವಿಡ್ ಪರೀಕ್ಷೆಯನ್ನು ಕೂಡ ನಡೆಸಿದ್ದು, ಇಂದು ಪರೀಕ್ಷಾ ವರದಿ ನೆಗೆಟಿವ್ ಎಂದು ಬಂದಿದೆ.
ಈ ಬಗ್ಗೆ ಸ್ವತಃ ಸಚಿವ ಜೋಟ ಶ್ರೀನಿವಾಸ ಪೂಜಾರಿ ಅವರು ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿಗಳ ಸಂಪರ್ಕಕ್ಕೆ ಬಂದಿದ್ದೆ ಎನ್ನುವ ಕಾರಣಕ್ಕೆ ಇಂದಿನ ತನಕ ಹೋಂ ಕ್ವಾರಂಟೈನ್ ನಲ್ಲಿದ್ದೆ. ಇದೀಗ ಕೋವಿಡ್ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ, ಮತ್ತೆ ಙ್ನ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ. ತಮ್ಮೆಲ್ಲರ ಸಹಕಾರವಿರಲಿ ಎಂದು ಸಚಿವರು ಬರೆದುಕೊಂಡಿದ್ದಾರೆ.